ಮುಂಬೈ: ಹನುಮನ ಜನ್ಮಸ್ಥಳ ಯಾವುದು..? ಅಂಜನಾದ್ರಿನಾ? ಅಂಜನೇರಿನಾ? ತಿರುಮಲನಾ? ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ನಾಸಿಕ್‍ನಲ್ಲಿ ನಡೆಸಲಾದ ಧರ್ಮ ಸಂಸದ್‍ನಲ್ಲಿ ಭಾರೀ ಗಲಾಟೆ ನಡೆದಿದೆ.
Advertisement
ಹನುಮ ಜನ್ಮಸ್ಥಳದ ವಿಚಾರದಲ್ಲಿ ಮಹಾರಾಷ್ಟ್ರ ಕ್ಯಾತೆ ತೆಗೆದಿದೆ. ಹಲವು ಸ್ವಾಮೀಜಿಗಳು, ಕಿಷ್ಕಿಂದೆಯ ಹನುಮಾನ್ ಜನ್ಮಭೂಮಿ ಕ್ಷೇತ್ರದ ಗೋವಿಂದಾನಂದ ಸ್ವಾಮೀಜಿ ವಿರುದ್ಧ ಮುಗಿಬಿದ್ದಿದ್ದಾರೆ. ಹಿಂದೆ ರಾವಣ ಸೀತೆಯನ್ನು ಹೊತ್ತೊಯ್ದಿದ್ದ, ಆದರೆ ಈಗ ನೀವು ಹನುಮಂತನ ಜನ್ಮಸ್ಥಳವನ್ನೇ ಹೈಜಾಕ್ ಮಾಡ್ತಿದ್ದೀರಿ ಅಂತಾ ಆರೋಪಿಸಿದ್ದಾರೆ. ಇದಕ್ಕೆ ಗೋವಿಂದಾನಂದ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.
Advertisement
Advertisement
ಸುಮ್ನೆ ಮಾತಾಡೋದಲ್ಲ, ದಾಖಲೆ ಕೊಡಿ ಅಂತಾ ಸವಾಲ್ ಹಾಕಿದ್ದಾರೆ. ಈ ಹಂತದಲ್ಲಿ, ಮಹಾಂತ ಸುಧೀರದಾಸರು, ಆದಿಗುರು ಶಂಕರಾಚಾರ್ಯರನ್ನು ಕಾಂಗ್ರೆಸ್ಸಿಗ ಎಂದಿದ್ದು ಕಿಷ್ಕಿಂದೆಯ ಗೋವಿಂದಾನಂದ ಸ್ವಾಮೀಜಿಯ ಆಗ್ರಹಕ್ಕೆ ಕಾರಣವಾಯ್ತು. ಕೂಡಲೇ ಕ್ಷಮೆಗೆ ಒತ್ತಾಯಿಸಿದ್ರು. ಈ ವೇಳೆ ಮಹಾಂತ ಸುಧೀರ್ ದಾಸರು, ಮೈಕ್ ಹಿಡಿದು ಹಲ್ಲೆಗೆ ಮುಂದಾದ್ರು. ಇದರಿಂದ ಇನ್ನಷ್ಟು ಸಿಟ್ಟಿಗೆದ್ದ ಗೋವಿಂದಾನಂದ ಸ್ವಾಮೀಜಿ, ಸ್ವಾಮೀಜಿಗಳಿಗೆ ಅಪಮಾನ ಮಾಡ್ತೀರಾ..? ನೀವು ಈ ಧರ್ಮಸಂಸದ್‍ಗೆ ಕಳಂಕ.. ಕೂಡ್ಲೇ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದ್ರು.
Advertisement
ಕೊನೆಗೆ ಉಳಿದವರು ಸಮಾಧಾನ ಮಾಡೋ ಕೆಲಸ ಮಾಡಿದ್ರು. ಆದರೆ ನಾನು ಹಲ್ಲೆ ಮಾಡಲು ಯತ್ನಿಸಿಲ್ಲ. ಅವರೇ ಹಲ್ಲೆ ಮಾಡಿದರು ಅಂತಾ ನಾಟಕ ಮಾಡಿದ್ದಾರೆ ಎಂದು ಸುಧೀರ್ ದಾಸರು ಆರೋಪಿಸಿದ್ದಾರೆ. ಇದಕ್ಕೂ ಮುನ್ನ ಧರ್ಮಸಂಸದ್‍ನಲ್ಲಿ ಭಾಗವಹಿಸದಂತೆ ಗೋವಿಂದಾನಂದ ಸ್ವಾಮೀಜಿಗೆ ತಡೆ ಒಡ್ಡಲು ಮಹಾರಾಷ್ಟ್ರ ಪೊಲೀಸರು ನೋಡಿದ್ರು. ನೀವು ಹನುಮನ ಜನ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡ್ತಿದ್ದೀರಿ. ಇದರಿಂದ ಅಂಜನೇರಿ ಗ್ರಾಮಸ್ಥರ ಭಾವನೆಗಳಿಗೆ ಧಕ್ಕೆ ತಂದಿದ್ದೀರಿ. ನೀವು ಧರ್ಮಸಂಸದ್‍ನಲ್ಲಿ ಭಾಗವಹಿಸಬೇಡಿ. ಕಾನೂನು ಸುವ್ಯವಸ್ಥೆ ಹಾಳಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ರು.
ಇದಕ್ಕೆ ಡೋಂಟ್‍ಕೇರ್ ಎಂದ ಸ್ವಾಮೀಜಿ ಧರ್ಮಸಂಸದ್‍ನಲ್ಲಿ ಪಾಲ್ಗೊಂಡ್ರು. ಆದರೆ ಅಲ್ಲೂ ಮಹಾರಾಷ್ಟ್ರದ ಸ್ವಾಮೀಜಿಗಳು ಕಿರಿಕ್ ಮಾಡಿದ್ರು. ಕೊನೆಗೆ ಸಭೆಯೂ ಅರ್ಧಕ್ಕೆ ಮೊಟಕಾಯ್ತು.