ಬೆಂಗಳೂರು: ಹುಬ್ಬಳ್ಳಿಯ ನೇಹಾ ಹೀರೇಮಠ (Neha Hiremath) ಹತ್ಯೆಗೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಬಿಜೆಪಿ ಪ್ರತಿಭಟನೆ (BJP Protest) ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ರಾಯಚೂರು, ಕೊಪ್ಪಳ, ಚಾಮರಾಜನಗರ, ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ವಿವಿಧ ಸಂಘಟನೆಗಳೂ ಬೆಂಬಲ ಸೂಚಿಸಿವೆ. ಪ್ರತಿಭಟನಾಕಾರರು ಕರ್ನಾಟಕ ಸರ್ಕಾರ, ಮುಖ್ಯಮಂತ್ರಿಗಳು (Chief Minister) ಹಾಗೂ ಗೃಹ ಸಚಿವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದು, ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ದಾರೆ.
ಹಳೇ ಹುಬ್ಬಳ್ಳಿಯ (Hubballi) ದುರ್ಗದಬೈಲ್ ವೃತ್ತದಲ್ಲಿ ಟೈಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. `ಅಮರ್ ರಹೇ ನೇಹಾ ಹಿರೇಮಠ ಅಮರ್ ರಹೇ, ಸಿದ್ರಾಮುಲ್ಲಾ ಖಾನ್‌ಗೆ ಧಿಕ್ಕಾರ, ಡಿಕೆ ಬ್ರದರ್ಸ್ ಧಿಕ್ಕಾರ, ಡೌನ್ ಡೌನ್ ಕಾಂಗ್ರೆಸ್’ ಎಂಬಿತ್ಯಾಧಿ ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: 9 ಅಲ್ಲ 14 ಬಾರಿ ನೇಹಾಳನ್ನು ಇರಿದು ಕೊಂದ ಫಯಾಜ್- ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಏನಿದೆ?
ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸುವ ಪ್ರಯತ್ನ:
ಹುಬ್ಬಳ್ಳಿ-ಧಾರವಾಡದ ಕೆಲ ಭಾಗಗಳಲ್ಲಿ ನೇಹಾ ಹತ್ಯೆ ಖಂಡಿಸಿ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ವೇಳೆ ಕೆಲ ಕಾರ್ಯಕರ್ತರು ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಲು ಪ್ರಯತ್ನಿಸಿದ ದೃಶ್ಯಗಳೂ ಕಂಡುಬಂದಿತು.
ಈ ಪ್ರತಿಭಟನೆಗೆ ಶ್ರೀರಾಮ ಸೇನೆ, ಅಂಜುಮನ್ ಎ ಇಸ್ಲಾಂ ಸಂಸ್ಥೆ, ಎಬಿವಿಪಿ, ಎಸ್‌ಎಫ್‌ಐ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳೂ ಬೆಂಬಲ ಸೂಚಿಸಿದವು. ಇದನ್ನೂ ಓದಿ: West Bengal: 2016ರ ನೇಮಕಾತಿ ರದ್ದುಗೊಳಿಸಲು ಕೋಲ್ಕತ್ತಾ ಹೈಕೋರ್ಟ್ ಆದೇಶ