ಬೆಳಗಾವಿ: ಹಿಂಡಲಗಾ ಜೈಲು (Hindalaga Jail) ಸೇರಿದ್ದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮತ್ತು ನಿಷೇಧಿತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನ ಏಳು ಮಂದಿ ಕಾರ್ಯಕರ್ತರಿಗೆ ಬೆಳಗಾವಿ ಡಿಸಿಪಿ ರವೀಂದ್ರ ಗಡಾದಿ ಷರತ್ತುಬದ್ಧ ಜಾಮೀನು (Bail) ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.
Advertisement
ಬೆಳಗಾವಿ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾಡಿಯಿಂದ ಬಂಧಿತ ಎಸ್‍ಡಿಪಿಐ ಮತ್ತು ನಿಷೇಧಿತ ಪಿಎಫ್‍ಐ 7 ಕಾರ್ಯಕರ್ತರಿಗೂ ತಲಾ ಒಬ್ಬರಿಗೆ 50 ಸಾವಿರ ಬಾಂಡ್ ಪಡೆದುಕೊಂಡು ಜಾಮೀನು ಮಂಜೂರು ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಗೆದ್ದಿರೋ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್‍ನಂತಹ ಅಮಾಯಕರ ರಕ್ತ ಇದೆ: ಸಿದ್ದರಾಮಯ್ಯ
Advertisement
Advertisement
ಬೆಳಗಾವಿ (Belagavi) ನಗರದ ಆಜಂ ನಗರ ನಿವಾಸಿ ಪಿಎಫ್‍ಐ ಮಾಜಿ ಜಿಲ್ಲಾಧ್ಯಕ್ಷ ಝಕೀವುಲ್ಲಾ ಫೈಜಿ, ಎಸ್‍ಡಿಪಿಐ ಬೆಳಗಾವಿ ಜಿಲ್ಲಾಧ್ಯಕ್ಷ ಅಬೀದ್ ಖಾನ್ ಕಡೋಲಿ, ಶಿವಾಜಿ ನಗರ ನಿವಾಸಿ ಸಲಾವುದ್ದೀನ್ ಖಿಲೆವಾಲೆ, ಬದ್ರುದ್ದೀನ್ ಪಟೇಲ್, ಅಮನ್ ನಗರ ನಿವಾಸಿ ಸಮೀವುಲ್ಲಾ ಪೀರ್ಜಾದೆ,ಬೆಳಗಾವಿಯ ಬಾಕ್ಸೈಟ್ ರೋಡ್ ನಿವಾಸಿ ಜಹೀರ್ ಘೀವಾಲೆ ಹಾಗೂ ಬೆಳಗಾವಿಯ ವಿದ್ಯಾಗಿರಿ ನಿವಾಸಿ ರೆಹಾನ್ ಅಜೀಜ್ ಜಾಮೀನು ಪಡೆದುಕೊಂಡವರು.
Advertisement
ಕಳೆದ ಒಂದು ತಿಂಗಳ ಹಿಂದೆ ದೇಶಾದ್ಯಂತ ಪಿಎಫ್‍ಐ ಮತ್ತು ಎಸ್‍ಡಿಪಿಐ ಮುಖಂಡರು ಹಾಗೂ ಕಚೇರಿಗಳ ಮೇಲಿನ ದಾಳಿ ಖಂಡಿಸಿ ಬೆಳಗಾವಿ ತಾಲೂಕಿನ ಕಾಕತಿ ಬಳಿಯ ರಾಷ್ಟ್ರೀಯ ಹೆದ್ದಾರಿ ತಡೆದು ಪಿಎಫ್‍ಐ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಿಆರ್‌ಪಿಸಿ 110 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಂಡು ಸೆ.27 ರಂದು ಡಿಸಿಪಿ ರವೀಂದ್ರ ಗಡಾಡಿ ನೇತೃತ್ವದಲ್ಲಿ ನಡೆದಿದ್ದ ದಾಳಿ ನಡೆಸಿ 7ಜನರನ್ನು ಬಂಧಿಸಿ ಜೈಲಿಗಟ್ಟಿದ್ದರು.
ದಾಳಿ ವೇಳೆ ಎಸ್ಕೇಪ್ ಆಗಿದ್ದ ನಿಷೇಧಿತ ಪಿಎಫ್‍ಐ ಜಿಲ್ಲಾಧ್ಯಕ್ಷ ನವೀದ್ ಕಟಗಿ, ಒಂದು ವಾರ ಕಳೆದರೂ ಇನ್ನೂ ಬೆಳಗಾವಿ ಪೊಲೀಸರ ಕೈಗೆ ಸಿಗದೇ ನಾಪತ್ತೆ ಆಗಿದ್ದಾರೆ.