Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ: ಸಿದ್ದರಾಮಯ್ಯ

Bengaluru City

ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ: ಸಿದ್ದರಾಮಯ್ಯ

Public TV
Last updated: April 30, 2025 8:17 pm
Public TV
Share
4 Min Read
siddaramaiah 6
SHARE

-ಕೇಂದ್ರದ ಜಾತಿ ಗಣತಿ ನಿರ್ಧಾರ ಸ್ವಾಗತಿಸಿದ ಸಿಎಂ 

ಬೆಂಗಳೂರು: ಜಾತಿ ಗಣತಿ (Caste Census) ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಕೇಂದ್ರ ಸರ್ಕಾರದ ಜಾತಿ ಗಣತಿ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಇದನ್ನೂ ಓದಿ: ಸಿನಿಮಾ ಭರಾಟೆಲಿ ತೊಗಲು ಬೊಂಬೆ ಕಲೆ ನಶಿಸಿ ಹೋಗುತ್ತಿದೆ: ಪದ್ಮಶ್ರೀ ವಿಜೇತೆ ಭೀಮವ್ವ

ಕರ್ನಾಟಕದಲ್ಲಿ ನಾವು ಕೇವಲ ಜಾತಿ ಗಣತಿ ನಡೆಸದೇ ಅದರ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ ಮೀಸಲಾತಿ ನೀತಿಯನ್ನು ಪರಿಷ್ಕರಿಸಿ ಅದರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಜಾತಿ ಗಣತಿಯ ಜೊತೆಯಲ್ಲಿ ಈ ಪ್ರಕ್ರಿಯೆಯನ್ನು ಕೂಡಾ ಕೇಂದ್ರ ಸರ್ಕಾರ ಪೂರ್ಣಗೊಳಿಸಲಿದೆ ಎಂದು ನಂಬಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ನಿಮ್ಗೆ ಹುಚ್ಚು ಹಿಡಿದಿದ್ಯಾ? – ಪಾಕಿಸ್ತಾನದಲ್ಲಿ ಈಗ ಸೇನೆ Vs ಪೊಲೀಸ್‌ ಕಿತ್ತಾಟ

ವೈಜ್ಞಾನಿಕವಾದ ಮೀಸಲಾತಿ ನೀತಿಯನ್ನು ರೂಪಿಸುವುದೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಾಗಿದೆ. ಪ್ರತಿ ಬಾರಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂ ಕೋರ್ಟ್ ಇಂತಹದ್ದೊಂದು ಸಮೀಕ್ಷೆ ನಡೆಸುವ ಅಗತ್ಯವನ್ನು ಒತ್ತಿಒತ್ತಿ ಹೇಳುತ್ತಾ ಬಂದಿದೆ ಎನ್ನುವುದನ್ನು ಕೇಂದ್ರ ಸರ್ಕಾರ ಗಮನಿಸಬೇಕಾಗುತ್ತದೆ. ನಾನು ಧರ್ಮಸಿಂಗ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ರಚಿಸಿ ಜಾತಿಯ ಜೊತೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದ್ದೆ. ಕಾರಣಾಂತರಗಳಿಂದ ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದ ಆ ನಿರ್ಧಾರವನ್ನು ಕಾರ್ಯರೂಪಕ್ಕೆ ತರಲು ಮತ್ತೆ ನಾನು ರಾಜ್ಯದ ಮುಖ್ಯಮಂತ್ರಿ ಆಗಬೇಕಾಯಿತು ಎಂದು ನುಡಿದರು. ಇದನ್ನೂ ಓದಿ: ಗಾಯಬ್ ಪೋಸ್ಟ್‌ನಿಂದ `ಕೈ’ಗೆ ಗಾಯ – ಅನಗತ್ಯ ಹೇಳಿಕೆ ನೀಡದಂತೆ ಎಐಸಿಸಿ ಖಡಕ್ ಸೂಚನೆ

PM Modi 1

ಜಾತಿ ಗಣತಿ ಜೊತೆಯಲ್ಲಿ ಮೀಸಲಾತಿ ಮಿತಿ ಏರಿಕೆಯ ನಿರ್ಧಾರವನ್ನು ಸಂಪೂರ್ಣ ಬೆಂಬಲಿಸಿ ಅದನ್ನು ನಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ರೂಪಿಸಿ ದೇಶಾದ್ಯಂತ ಪ್ರಚಾರ ಮಾಡುತ್ತಾ ಬಂದ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ಅವರ ಅವಿರತ ಪ್ರಯತ್ನದ ಒತ್ತಡದಿಂದಾಗಿಯೇ ಇಂದು ಪ್ರಧಾನಿ ನರೇಂದ್ರ ಮೋದಿಯವರು ಜಾತಿ ಗಣತಿ ನಡೆಸುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನುವುದನ್ನು ಅವರು ಒಪ್ಪಿಕೊಳ್ಳದೇ ಇರಬಹುದು, ಆದರೆ ದೇಶ ಖಂಡಿತಾ ಒಪ್ಪುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಪತಿಯೊಂದಿಗೆ ಗರ್ಭಿಣಿ ಕಿಯಾರಾ ಅಡ್ವಾಣಿ ವೆಕೇಷನ್

ಜಾತಿ ಗಣತಿ ಟೀಕಿಸಿದ್ದ ಬಿಜೆಪಿ ಈಗ ಒಪ್ಪಿಕೊಂಡಿದೆ:
ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ ಭಾರತೀಯ ಜನತಾ ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದರು. ಇದನ್ನೂ ಓದಿ: Haveri | ಮಾರ್ಗ ಮಧ್ಯೆ ಸಾರಿಗೆ ಬಸ್ ನಿಲ್ಲಿಸಿ ನಮಾಜ್ ಮಾಡಿದ ಡ್ರೈವರ್

ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ ಎನ್ನುವುದು ವಾಸ್ತವ. ಜಾತಿ ಇಲ್ಲ ಎನ್ನುವುದು ಆತ್ಮವಂಚನೆ. ಜಾತಿ ಎನ್ನುವ ವಾಸ್ತವವನ್ನು ಒಪ್ಪಿಕೊಳ್ಳುವ ಮೂಲಕವೇ ಅದರ ನಾಶಕ್ಕೆ ಪ್ರಯತ್ನಿಸಬೇಕಾಗಿದೆ. ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸುವ ಮೂಲಕವೇ ಜಾತಿನಾಶ ಸಾಧ್ಯ ಎಂದು ನಾನು ಬಲವಾಗಿ ನಂಬಿದವನು ಎಂದು ಹೇಳಿದರು. ಇದನ್ನೂ ಓದಿ: ಭಾರತದ ವಿರುದ್ಧ ವಿಷ ಕಾರುತ್ತಿದ್ದ ಅಫ್ರಿದಿ ಬಾಯಿ ಬಂದ್‌!

ಕರ್ನಾಟಕದಲ್ಲಿ ನಾವು ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಇದನ್ನು ಬಿಜೆಪಿಯ ರಾಜ್ಯ ಘಟಕ ನಾನಾ ಸಬೂಬುಗಳನ್ನು ಮುಂದೊಡ್ಡಿ ವಿರೋಧಿಸುತ್ತಿದೆ. ಈ ಸಮೀಕ್ಷೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿಯನ್ನು ಪರಿಷ್ಕರಿಸಿ ಈಗಿನ ಶೇಕಡಾ 50ರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಈ ಎಲ್ಲಾ ಪ್ರಯತ್ನಗಳಿಗೆ ಅಡ್ಡಗಾಲು ಹಾಕುತ್ತಿರುವ ಬಿಜೆಪಿಯ ರಾಜ್ಯಘಟಕದ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಿವಿ ಹಿಂಡಿ ಬುದ್ಧಿ ಹೇಳಬೇಕೆಂದು ಮನವಿ ಮಾಡಿದರು. ಇದನ್ನೂ ಓದಿ: ಪಾಪಿ ಪಾಕಿಸ್ತಾನ – ಗಡಿಯಲ್ಲಿ ಸುರಂಗ ಕುತಂತ್ರ ತನಿಖೆಗೆ ಬಿಎಸ್‌ಎಫ್‌ಗೆ ನಿರ್ದೇಶನ

ನಮ್ಮ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಲೇ ಕೊನೆಗೆ ಅದನ್ನು ತಮ್ಮ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿಕೊಂಡ ರೀತಿಯಲ್ಲಿಯೇ ಇದೀಗ ನಮ್ಮ ಜಾತಿಗಣತಿ ಕಾರ್ಯಕ್ರಮವನ್ನು ಕೂಡಾ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕೈಗೆತ್ತಿಕೊಂಡಿರುವುದು ಕಾಂಗ್ರೆಸ್ ಪಕ್ಷದ ನೀತಿ ಮತ್ತು ಕಾರ್ಯಕ್ರಮಗಳು ಜನಪರವಾಗಿರುವುದಕ್ಕೆ ಸಾಕ್ಷಿಯಾಗಿದೆ. ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಒಂದು ಪರಿಪೂರ್ಣ ಮಾದರಿಯಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾವುದೇ ಸಲಹೆ-ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ನಾವು ಬಿರುಗಾಳಿ ಬೀಸಿದ್ರೂ ʻಅಲ್ಲಾಹು ಅಕ್ಬರ್ʼ ಅಂತೀವಿ – ಪಹಲ್ಗಾಮ್ ಜಿಪ್‌ಲೈನ್ ಆಪರೇಟರ್ ತಂದೆ

TAGGED:bengalurubjpCaste Censuscm siddaramaiahcongressnarendra modiಜಾತಿ ಗಣತಿನರೇಂದ್ರ ಮೋದಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashika
ರಾಶಿಕಾ ಹೇಳೋ ಆ 5 ಫೈನಲಿಸ್ಟ್‌ಗಳ್ಯಾರು?
Cinema Districts Karnataka Latest Sandalwood Top Stories
Allu Arjun Lokesh Kanagaraj
ಅಲ್ಲು ಅರ್ಜುನ್, ಲೋಕೇಶ್ ಕಾಂಬಿನೇಷನ್ ಅದ್ಧೂರಿ ಬಜೆಟ್ ಚಿತ್ರ..!
Cinema Latest South cinema Top Stories
yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood

You Might Also Like

rowdy sheeter murder
Bengaluru City

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

Public TV
By Public TV
2 hours ago
ksrtc accident chamarajanagara
Chamarajanagar

KSRTC ಬಸ್‌-ಬೈಕ್ ನಡುವೆ ಡಿಕ್ಕಿ; ಇಬ್ಬರು ಸೋಲಿಗ ಯುವಕರು ಸಾವು

Public TV
By Public TV
2 hours ago
Harmanpreet Kaur
Cricket

WPL 2026: ಹರ್ಮನ್‌ಪ್ರೀತ್‌ ಬೆಂಕಿ ಬ್ಯಾಟಿಂಗ್ -‌ ಗುಜರಾತ್‌ ವಿರುದ್ಧ ಮುಂಬೈಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
2 hours ago
dandeli advocate ajit naik murder case
Court

ಕಾರವಾರ| ಹಿರಿಯ ವಕೀಲ ಅಜಿತ್ ನಾಯ್ಕ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Public TV
By Public TV
3 hours ago
Upendra Dwivedi
Latest

ಭಾರತ, ಪಾಕ್‌ ಗಡಿ ಬಳಿ 2, ಎಲ್‌ಒಸಿಯಲ್ಲಿ 6 ಉಗ್ರರ ಶಿಬಿರಗಳು ಸಕ್ರಿಯ: ಜನರಲ್ ಉಪೇಂದ್ರ ದ್ವಿವೇದಿ

Public TV
By Public TV
3 hours ago
rahul gandhi siddaramaiah dk shivakumar 1
Latest

ಸಿಎಂ, ಡಿಸಿಎಂ ಜೊತೆ ರಾಹುಲ್ ಪ್ರತ್ಯೇಕ ಮಾತುಕತೆ – ತಿಂಗಳಾಂತ್ಯಕ್ಕೆ ದೆಹಲಿಗೆ ಬುಲಾವ್ ಭರವಸೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?