ಮಂಗಳೂರು: ಚಲಿಸುತ್ತಿದ್ದ ಬಸ್ನಲ್ಲೇ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ, ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಖಾಸಗಿ ಬಸ್ ಕಂಡಕ್ಟರ್‌ನನ್ನು (Bus Conductor) ಮಂಗಳೂರು ದಕ್ಷಿಣ ಠಾಣೆ ಪೊಲೀಸರು (Mangaluru South Police) ಬಂಧಿಸಿದ್ದಾರೆ.
ಕಾಮುಕ ಕಂಡಕ್ಟರ್ ಇರ್ಫಾನ್ (32) ಬಂಧಿತ ಆರೋಪಿ. ಈತ ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ಕಲ್ಲೇರಿ ನಿವಾಸಿಯಾಗಿದ್ದು, ಪ್ರಸ್ತುತ ಉಪ್ಪಿನಂಗಡಿಯ ಕರ್ವೇಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಾನೆ. ಈತ ಮಂಗಳೂರು ಮತ್ತು ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್ನಲ್ಲಿ (Private Bus) ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ. ಇದನ್ನೂ ಓದಿ: 8ನೇ ತರಗತಿ ವಿಧ್ಯಾರ್ಥಿನಿ ಆತ್ಮಹತ್ಯೆ ಕೇಸ್ – ಶಿಕ್ಷಕಿಯರು, ಅಡುಗೆ ಸಹಾಯಕಿ ಸೇರಿ ನಾಲ್ವರ ವಿರುದ್ಧ FIR

ಏನಿದು ಕೇಸ್?
ಜುಲೈ 9 ರ ಗುರುವಾರ ಸಂಜೆ ಸುಮಾರು 5 ಗಂಟೆ ಸುಮಾರಿಗೆ ಮಂಗಳೂರು – ವಿಟ್ಲ ನಡುವೆ ಸಂಚರಿಸುವ ವೇಳೆ ಸೆಲಿನ ಬಸ್ ನಲ್ಲಿ ಘಟನೆ ನಡೆದಿದೆ. ಬಸ್ನಲ್ಲಿದ್ದ ಕಾಲೇಜು ವಿದ್ಯಾರ್ಥಿನಿಯರನ್ನ ಗುರಿಯಾಗಿಸಿಕೊಂಡು ಕಂಡಕ್ಟರ್ ಇರ್ಫಾನ್, ವಿಕೃತವಾಗಿ ವರ್ತಿಸಲು ಆರಂಭಿಸಿದ್ದಾನೆ. ವಿದ್ಯಾರ್ಥಿನಿಯರ ಮುಂದೆ ತನ್ನ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪಿ, ಅತ್ಯಂತ ಅಸಭ್ಯವಾಗಿ ಸನ್ನೆ ಮಾಡಿದ್ದಾನೆ. ಅಷ್ಟೇ ಅಲ್ಲದೇ, ವಿದ್ಯಾರ್ಥಿನಿಯರನ್ನು ಬಸ್ನ ಹಿಂದಿನ ಸೀಟಿಗೆ ಬರುವಂತೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಲಾಗಿದೆ.
ಕಂಡಕ್ಟರ್‌ನ ವಿಕೃತ ವರ್ತನೆಯಿಂದ ಆಘಾತಕ್ಕೊಳಗಾದ ವಿದ್ಯಾರ್ಥಿನಿಯರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಾಮುಕ ಕಂಡಕ್ಟರ್‌ನನ್ನ ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ತಗ್ಗಿದ ಮಳೆ – ಚಿಕ್ಕೋಡಿ ವ್ಯಾಪ್ತಿಯ 3 ಪ್ರಮುಖ ಸೇತುವೆಗಳು ಸಂಚಾರಕ್ಕೆ ಮುಕ್ತ
