KSRTC, BMTC ಬಸ್‌ಗಳಲ್ಲಿ ಕಂಡಕ್ಟರ್ 10 ರೂ. ಕಾಯಿನ್ ತೆಗೆದುಕೊಳ್ಳಲೇಬೇಕು!

Public TV
1 Min Read
KSRTC BMTC COIN

– ದೂರು ಬಂದರೆ ಕ್ರಮ: ಸಾರಿಗೆ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದ ಬಸ್‌ ಕಂಡಕ್ಟರ್‌ಗಳಿಗೆ ಸಾರಿಗೆ ಇಲಾಖೆ (Transport Department) ಖಡಕ್‌ ಸೂಚನೆಯೊಂದನ್ನು ಭಾನುವಾರ ಕೊಟ್ಟಿದೆ.

ಹೌದು, ಇಷ್ಟು ದಿನ 10 ರೂ. ನಾಣ್ಯ ಕೊಟ್ಟರೆ ಕಂಡಕ್ಟರ್‌ಗಳು ತೆಗೆದುಕೊಳ್ಳುತ್ತಿರಲಿಲ್ಲ. ನಾಣ್ಯ ಕೊಟ್ಟಾಗ ಇದು ಹೋಗಲ್ಲ ನೋಟು ಕೊಡಿ ಎಂದು ಹೇಳುತ್ತಿದ್ದರು. ಹೀಗಾಗಿ 10 ರೂಪಾಯಿ ನಾಣ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ತಿಳುವಳಿಕೆ ಪತ್ರದ ಮೂಲಕ ಸಾರಿಗೆ ಇಲಾಖೆಯ ಕಾರ್ಯದರ್ಶಿಯು ಎಲ್ಲಾ ನಿಗಮಗಳಿಗೂ ವಾರ್ನಿಂಗ್ ಮಾಡಿದ್ದಾರೆ.

ಕೆಎಸ್ ಆರ್ ಟಿಸಿ (KSRTC), ಬಿಎಂಟಿಸಿ (BMTC), ವಾಯುವ್ಯ ಸಾರಿಗೆ ಹಾಗೂ ಈಶಾನ್ಯ ಸಾರಿಗೆ ನಿಗಮಕ್ಕೆ ಸಾರಿಗೆ ಇಲಾಖೆಯಿಂದ ಪತ್ರ ಬರೆಯಲಾಗಿದ್ದು, ಅದರಲ್ಲಿ ರಾಜ್ಯದ ಎಲ್ಲಾ ಸಾರಿಗೆ ಬಸ್ ಗಳಲ್ಲೂ 10 ರೂ. ನಾಣ್ಯ ಪಡೆಯುವಂತೆ ಆದೇಶಿಸಲಾಗಿದೆ. ಇದನ್ನೂ ಓದಿ: ಅಯೋಧ್ಯೆಗೆ ನನ್ನನ್ನು ಆಹ್ವಾನಿಸಿಲ್ಲ: ಡಿ.ಕೆ ಶಿವಕುಮಾರ್

KSRTC

ಬಸ್ ಪ್ರಯಾಣದ ವೇಳೆ ಪ್ರಯಾಣಿಕರು 10 ರೂ. ನಾಣ್ಯ (10 Rs Coin) ನೀಡಿದರೆ ಪಡೆಯಬೇಕು. ಒಂದು ವೇಳೆ 10 ರೂ. ನಾಣ್ಯ ಪಡೆಯದೇ ಇದ್ದರೆ, ಈ ಬಗ್ಗೆ ಪ್ರಯಾಣಿಕರಿಂದ ದೂರು ಬಂದರೆ ಆ ಬಸ್ಸಿನ ನಿರ್ವಾಹಕರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಇಲಾಖೆ ಎಚ್ಚರಿಕೆ ರವಾನಿಸಿದೆ.

Share This Article