ಬೆಂಗಳೂರು: ಮಂಡ್ಯ (Mandya) ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಪ್ರಮುಖರ ಸಭೆ ನಡೆಸಲಾಗುವುದು ಎಂದು ಮಂಡ್ಯ ಸಂಸದೆ ಸುಮಲತಾ (Sumalatha Ambareesh) ಹೇಳಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ (Social Media) ಭಾನುವಾರ ನಡೆದ ಸಭೆಯಲ್ಲಿ ಭಾಗಿಯಾದ ಎಲ್ಲರಿಗೆ ಧನ್ಯವಾದ ಹೇಳಿದ್ದಾರೆ.
ಪೋಸ್ಟ್‌ನಲ್ಲಿ ಏನಿದೆ?
ಭಾನುವಾರ ನನ್ನ ನಿವಾಸದಲ್ಲಿ ನನ್ನ ಗೆಲುವಿಗೆ ಹಗಲಿರುಳು ದುಡಿದಂತ ಹಾಗೂ ನನ್ನ ಈ ಐದು ವರ್ಷಗಳ ಆಡಳಿತ ಅವಧಿಯಲ್ಲಿ ನನ್ನನ್ನು ಸಂಪೂರ್ಣ ಬೆಂಬಲಿಸಿದಂತಹ ಸ್ವಾಭಿಮಾನಿ ಕುಟುಂಬದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಲಾಯಿತು. ನಂತರ ನಡೆದ ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನನ್ನ ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸಲಾಯಿತು. ಹಾಗೂ ಲೋಕಸಭಾ ಚುನಾವಣೆಯ ರೂಪುರೇಷೆಗಳನ್ನು ಸುದೀರ್ಘ ವಾಗಿ ಚರ್ಚಿಸಲಾಯಿತು.
ನನ್ನ ಆಹ್ವಾನದ ಮೇರೆಗೆ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಮುಖರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡು ಒಕ್ಕೊರಲಿನಿಂದ ಬೆಂಬಲಿಸುವುದಲ್ಲದೇ ತಾವು ತೆಗೆದುಕೊಳ್ಳುವ ನಿಲುವಿಗೆ ಬದ್ಧರಾಗಿರುತ್ತೇವೆ ಎಂದು ತೀರ್ಮಾನಿಸಿದರು. ಈ ಮಹತ್ವದ ಸಭೆಯಲ್ಲಿ ಕಳೆದ ಚುನಾವಣೆಯಲ್ಲಿ ನನ್ನ ಬೆನ್ನಿಗೆ ನಿಂತು ಬೆಂಬಲಿಸಿದ ನನ್ನ ಪ್ರೀತಿಯ ಮಗ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಸೇರಿದಂತೆ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪ್ರಮುಖರು, ಹಿತೈಷಿಗಳು ಭಾಗವಹಿಸಿದರು. ನಾನಾ ಪಕ್ಷಗಳ ಪ್ರಮುಖರು ಭಾಗಿಯಾಗಿ ಬೆಂಬಲ ನೀಡಿದ್ದಕ್ಕೆ ಹೃದಯ ಪೂರ್ವಕ ಧನ್ಯವಾದಗಳು. ಇದನ್ನೂ ಓದಿ: ಬ್ರಿಟನ್ ಲೇಖಕಿ ನಿತಾಶಾ ಕೌಲ್‌ಗೆ ನೋ ಎಂಟ್ರಿ – ಬೆಂಗಳೂರು ವಿಮಾನ ನಿಲ್ದಾಣದಿಂದಲೇ ವಾಪಸ್
ಇದು ಮೊದಲ ಹಂತದ ಸಭೆಯಾಗಿದ್ದು, ಮುಂದಿನ ದಿನಗಳಲ್ಲಿ ಮಂಡ್ಯ ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಪ್ರಮುಖರ ಸಭೆ ಮಾಡಿ, ಚುನಾವಣೆ ಕುರಿತಂತೆ ಸಭೆ ಮಾಡುವ ಕುರಿತಂತೆ ಚರ್ಚಿಸಲಾಯಿತು. ಈಗಾಗಲೇ ನಾನು ಬಿಜೆಪಿಗೆ ಬೆಂಬಲ ನೀಡಿರುವುದರಿಂದ ಮತ್ತು ನನ್ನ ಕರ್ಮಭೂಮಿ ಮಂಡ್ಯ ಆಗಿರುವುದರಿಂದ ದೊಡ್ಡ ಮಟ್ಟದಲ್ಲೇ ಈ ಬಾರಿ ಬೆಂಬಲ ಸಿಗುವ ವಿಶ್ವಾಸವನ್ನು ಎಲ್ಲರೂ ವ್ಯಕ್ತಪಡಿಸಿದ್ದು ಮತ್ತಷ್ಟು ಆನೆ ಬಲ ಬಂತಾಗಿದೆ.
ಅಂಬರೀಶ್ ಅವರು ಮಂಡ್ಯ ಜಿಲ್ಲೆಗೆ ನೀಡಿರುವ ಕೊಡುಗೆ ಹಾಗೂ ಅವರ ಕನಸುಗಳನ್ನು ಮುಂದುವರೆಸಿಕೊಂಡು ಹೋಗುವುದಕ್ಕಾಗಿ ಮತ್ತು ಸ್ವತಂತ್ರ ಅಭ್ಯರ್ಥಿಯಾಗಿದ್ದರೂ ನನ್ನ ಸ್ವಾಭಿಮಾನಿ ಜನರಿಂದ ಸಿಕ್ಕಿರುವ ಪ್ರೀತಿ, ವಿಶ್ವಾಸಕ್ಕಾಗಿ ಎಂದೆಂದಿಗೂ ನಾನು ಮಂಡ್ಯ ಜನರೊಂದಿಗೆ ಇರುವೆ. ಸಭೆಯಲ್ಲಿ ಭಾಗಿಯಾದ ಎಲ್ಲರಿಗೂ ಮತ್ತೊಮ್ಮೆ ಕೃತಜ್ಞತೆಗಳು. ಇದನ್ನೂ ಓದಿ: TMC ಪ್ರಭಾವಿ ಶೇಖ್ ಷಹಜಹಾನ್ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ