ನವದೆಹಲಿ: 2024ರ ಲೋಕಸಭಾ ಚುನಾವಣೆಯ (Lok Sabha Elections) ಮತ ಎಣಿಕೆ ಕಾರ್ಯ ಇಂದು (ಮಂಗಳವಾರ) ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಎನ್‌ಡಿಎ ಮೈತ್ರಿ ಕೂಟ ಆರಂಭಿಕ ಮುನ್ನಡೆ ಸಾಧಿಸಿದೆ. ಈಗಾಗಲೇ ದೇಶದೆಲ್ಲೆಡೆ ಬಿಜೆಪಿ ಕಾರ್ಯಕರ್ತರು (BJP Workers) ಸಂಭ್ರಮಾಚರಣೆಗೆ ಸಜ್ಜಾಗಿದ್ದಾರೆ.
ಗೆಲುವಿನ ವಿಶ್ವಾಸದಲ್ಲಿರುವ ಎನ್‌ಡಿಎ ಕೂಟ ಫಲಿತಾಂಶ ಪ್ರಕಟವಾಗುವ ಮುನ್ನವೇ ವಿಜಯೋತ್ಸವಕ್ಕೆ (Celebration) ಭರ್ಜರಿ ತಯಾರಿ ನಡೆಸಿದೆ. ಇದನ್ನೂ ಓದಿ: ಸಾಕ್ಷ್ಯಗಳಿದ್ದ 9 ಫೋನ್ ನಾಶ – ಸ್ಟಾರ್ ಹೋಟೆಲ್‌ನಲ್ಲಿ 10 ಲಕ್ಷ ರೂ. ಮೌಲ್ಯದ ರೂಮ್‌ನಲ್ಲಿ ವಾಸ!
ದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬೃಹತ್ ಔತಣ ಕೂಟಕ್ಕೆ ತಯಾರಿ ನಡೆದಿದೆ. ಇನ್ನೂ ಬಿಹಾರದ ಪಾಟ್ನಾದಲ್ಲಿ 400 ಕೆಜಿ ಲಡ್ಡು ಸಿದ್ಧಗೊಳಿಸಿದ್ದಾರೆ. ಮುಂಬೈ, ಆಗ್ರಾ ಮತ್ತು ಭೋಪಾಲ್ ಸೇರಿದಂತೆ ಹಲವೆಡೆ ಬಿಜೆಪಿ ಕಾರ್ಯಕರ್ತರು ಲಡ್ಡು ತಯಾರಿಸಿದ್ದಾರೆ.
ಇತ್ತ ಬೆಂಗಳೂರಿನಲ್ಲೂ (Bengaluru) ಬಿಜೆಪಿ ಕಚೇರಿಯನ್ನ ವಿದ್ಯುತ್ ದೀಪಾಲಂಕಾರಗಳಿಂದ ಸಿಂಗರಿಸಲಾಗಿದ್ದು, ಸಂಭ್ರಮಾಚರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಭಾರತದ ಮಹಾ ತೀರ್ಪಿಗೆ ಕ್ಷಣಗಣನೆ- ಮಹಾಫಲಿತಾಂಶಕ್ಕೆ ಕಾಯುತ್ತಿದೆ ಜಗತ್ತು
ಎನ್‌ಡಿಗೆ ಆರಂಭಿಕ ಮುನ್ನಡೆ:
ಬಹುನಿರೀಕ್ಷಿತ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. ದೇಶಾದ್ಯಂತ ಎನ್‌ಡಿಎ 311 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದು, ಇಂಡಿಯಾ ಒಕ್ಕೂಟ 152 ಹಾಗೂ ಇತರೇ ಪಕ್ಷಗಳು 51 ಕ್ಷೇತ್ರಗಳಲ್ಲಿ ಆರಂಭಿಕ ಹಿನ್ನಡೆ ಅನುಭವಿಸಿವೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ರಾಯ್ ಬರೇಲಿ ಹಾಗೂ ವಯನಾಡ್ ಎರಡೂ ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದೆ.
ಬೆಂಗಳೂರು ಗ್ರಾಮಾಂತರದಲ್ಲಿ ಹಾವು-ಏಣಿ ಆಟ:
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹಾವು – ಏಣಿ ಆಟ ಶುರುವಾಗಿದೆ. ಅಂಚೆ ಮತಗಳಲ್ಲಿ ಡಾ.ಸಿ.ಎನ್ ಮಂಜುನಾಥ್ ಮುನ್ನಡೆ ಸಾಧಿಸಿದ್ದರೆ, ನಂತರ ಡಿ.ಕೆ ಸುರೇಶ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಳಿಕ ಮೊದಲ ಸುತ್ತಿನ ಮತ ಏಣಿಕೆಯಲ್ಲಿ ಮಂಜುನಾಥ್ ಅಲ್ಪ ಮತಗಳ ಮುನ್ನಡೆ ಸಾಧಿಸಿದ್ದಾರೆ. ಅಲ್ಲದೇ ಉತ್ತರ ಕನ್ನಡ, ಬೆಳಗಾವಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದರೆ, ಕೋಲಾರ, ದಾವಣಗೆರೆ, ಚಿಕ್ಕೋಡಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಅಂಚೆಯಲ್ಲಿ ಮಂಜುನಾಥ್ ಮುನ್ನಡ