ಇಂಫಾಲ: ಮಣಿಪುರದಲ್ಲಿ (Manipur) ಮತ್ತೆ ಹಿಂಸಾಚಾರ (Violence) ಭುಗಿಲೆದ್ದಿದೆ. ಇಂಫಾಲದ (Imphal) ಪಶ್ಚಿಮ ಜಿಲ್ಲೆಯಲ್ಲಿ ಹಲವು ಸುತ್ತುಗಳ ಗುಂಡುಗಳನ್ನು ಹಾರಿಸಲಾಗಿದ್ದು, ಕನಿಷ್ಠ 2 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಪಟ್ಸೋಯಿ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಕೀಥೆಲ್ಮನ್ಬಿಯಲ್ಲಿ ಘಟನೆ ಸಂಭವಿಸಿದೆ. ದಾಳಿಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Advertisement
Advertisement
ಸದ್ಯ ಭದ್ರತಾ ಪಡೆಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಘಟನೆ ಬಳಿಕ ಪ್ರದೇಶದಲ್ಲಿ ಜಮಾಯಿಸಿದ ಮೈತೆಯಿ ಮಹಿಳೆಯರ ಗುಂಪನ್ನು ಭದ್ರತಾ ಪಡೆಗಳು ಮುಂದೆ ಸಾಗದಂತೆ ತಡೆದಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಭದ್ರತೆಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಶ್ಚಿಮ ಬಂಗಾಳ ಸಚಿವನ ಮನೆ ಮೇಲೆ ಇಡಿ ದಾಳಿ
Advertisement
ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಪ್ರಾರಂಭವಾಗಿದ್ದು, ಅಂದಿನಿಂದ ಹಿಂಸಾಚಾರದಲ್ಲಿ 180 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ.
Advertisement
ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಮೈತೆಯಿ ಸಮುದಾಯದ ಬೇಡಿಕೆಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದೆ. ಮಣಿಪುರದ ಜನಸಂಖ್ಯೆಯ 53% ರಷ್ಟಿರುವ ಮೈತೆಯಿಗಳು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದವರು ನಾಗಾಗಳು ಮತ್ತು ಕುಕಿಗಳು 40% ಕ್ಕಿಂತ ಸ್ವಲ್ಪ ಹೆಚ್ಚು ಮತ್ತು ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ. ಇದನ್ನೂ ಓದಿ: ಇಸ್ಪೀಟ್ ಅಡ್ಡೆಯ ಮೇಲೆ ದಾಳಿ – 1.78 ಲಕ್ಷ ರೂ. ಜಪ್ತಿ
Web Stories