ನವದೆಹಲಿ: ಗಡಿ ನಿಯಂತ್ರಣ ರೇಖೆಯಲ್ಲಿ (LoC) ಭಾರತ (India) ಮತ್ತು ಪಾಕಿಸ್ತಾನದ (Pakistan) ನಡುವಿನ ಘರ್ಷಣೆ ಉಲ್ಬಣಗೊಳ್ಳುವ ಸಾಧ್ಯತೆ ಇದ್ದು, ಭಾರತದಲ್ಲಿ ಉಗ್ರಗಾಮಿ ದಾಳಿಯ (Terror Attack) ಸಾಧ್ಯತೆಯೂ ಇದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆ (US Intelligence Agency) ಎಚ್ಚರಿಕೆ ನೀಡಿದೆ. ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಆಧರಿಸಿ ಈ ಎಚ್ಚರಿಕೆಯನ್ನು ನೀಡಲಾಗಿದೆ.
ಪಾಕಿಸ್ತಾನವು ಭಾರತ ವಿರೋಧಿ ಉಗ್ರಗಾಮಿ ಮತ್ತು ಭಯೋತ್ಪಾದಕ ಗುಂಪುಗಳನ್ನು ಬೆಂಬಲಿಸುವ ಸುದೀರ್ಘ ಇತಿಹಾಸವನ್ನು ಹೊಂದಿದೆ. ಭಾರತ ಸರ್ಕಾರ ಕಾಶ್ಮೀರದ ಮೇಲೆ ಹಿಡಿತ ಹೆಚ್ಚಿಸುತ್ತಿದ್ದು ಇದು ಪಾಕ್ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣದಿಂದ ಭಾರತದ ವಿರೋಧಿ ಉಗ್ರಗಾಮಿ ಗುಂಪುಗಳು ಕಾಶ್ಮೀರದಲ್ಲಿ ಸಂಘರ್ಷ ಸೃಷ್ಟಿಸಲು ಪ್ರಯತ್ನಿಸುತ್ತಿದ್ದು, ಬೇರೆ ಭಾಗಗಳಲ್ಲೂ ದಾಳಿ ನಡೆಯುವ ಸಂಭವಗಳಿದೆ ಎಂದು ಎಚ್ಚರಿಸಿದೆ. ಇದನ್ನೂ ಓದಿ: ಮೊದಲು ನಿಮ್ಮ ದೇಶವನ್ನು ನೋಡಿಕೊಳ್ಳಿ – ಪಾಕಿಸ್ತಾನಕ್ಕೆ ಭಾರತ ವಾರ್ನಿಂಗ್
Advertisement
Advertisement
ಇದರ ಜೊತೆಗೆ ಚೀನಾದ ಜೊತೆಗೂ ಭಾರತದ ಸಂಬಂಧ ಮತ್ತಷ್ಟು ಹದಗೆಡಲಿದೆ ಎಂದು ಅಮೆರಿಕ ಗುಪ್ತಚರ ಸಂಸ್ಥೆ ಭವಿಷ್ಯ ನುಡಿದಿದೆ. 2020ರ ಗಾಲ್ವಾನ್ ಘರ್ಷಣೆಯ ನಂತರ ಭಾರತ ಮತ್ತು ಚೀನಾ ನಡುವಿನ ಸಂಬಂಧಗಳು ಕೆಟ್ಟಿವೆ. ಎರಡು ದೇಶಗಳು ಮಿಲಿಟರಿ ಬಲವನ್ನು ಹೆಚ್ಚಿಸಿಕೊಳ್ಳುತ್ತಿದ್ದು ಇದು ಯುದ್ಧದ ವಾತವರಣ ಸೃಷ್ಟಿಸಿದೆ ಎಂದು ಕಳವಳ ವ್ಯಕ್ತಪಡಿಸಿದೆ. ಇದನ್ನೂ ಓದಿ: ಪಾರಿವಾಳದ ಕಾಲಿನಲ್ಲಿ ಕ್ಯಾಮೆರಾ – ಬೇಹುಗಾರಿಕೆ ಶಂಕೆ