– ರಾಹುಲ್ ಗಾಂಧಿ ಹೇಳಿಕೆ ನಾಚಿಗೇಡು ಎಂದು ವಾಗ್ದಾಳಿ
ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (Manmohan Singh) ಅವರ ಅಂತ್ಯಕ್ರಿಯೆ ವಿಚಾರದಲ್ಲಿ ಕೆಟ್ಟ ರಾಜಕೀಯ ಮಾಡಬೇಡಿ ಎಂದು ಬಿಜೆಪಿ ಸಂಸದ ಸಂಬಿತ್ ಪಾತ್ರ (Sambit Patra) ತಿರುಗೇಟು ನೀಡಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಹುಲ್ ಗಾಂಧಿ (Rahul Gandhi) ಹೇಳಿಕೆ ನಾಚಿಗೇಡು ಮತ್ತು ದುರದೃಷ್ಟಕರ ಸಂಗತಿ, ಕೀಳುಮಟ್ಟದ ರಾಜಕೀಯ ಎಂದು ಕಿಡಿ ಕಾರಿದರು.
Advertisement
Advertisement
ದೇಶದ ಶ್ರೇಷ್ಠ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ಅವರ ಸಾವಿನಲ್ಲಿ ಘನತೆ ಮೆರೆಬೇಕು. ಆದ್ರೆ ರಾಹುಲ್ ಅವರ ಹೇಳಿಕೆ ನಾಡಿಗೇಡಿನ ಸಂಗತಿಯಾಗಿದೆ. ಕಾಂಗ್ರೆಸ್ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ಜಾಗ ನೀಡುವಂತೆ ಮನವಿ ಮಾಡಿತ್ತು. ಅದಕ್ಕೆ ಸರ್ಕಾರ ಒಪ್ಪಿದೆ, ಸಿಂಗ್‌ರ ಗೌರವಾರ್ಥವಾಗಿ ಸ್ಮಾರಕ ನಿರ್ಮಿಸುವ ಉದ್ದೇಶವನ್ನು ವ್ಯಕ್ತಪಡಿಸಿದೆ. ಸ್ಮಾರಕ ಮಾಡುವುದರಿಂದ ಇಡೀ ಜಗತ್ತು ಅವರ ಸಕಾರಾತ್ಮ ಕಾರ್ಯಗಳನ್ನು ನೆನಪಿಸಿಕೊಳ್ಳುತ್ತದೆ ಎಂದು ಹೇಳಿದರು.
Advertisement
ಸ್ಮಾರಕ ನಿರ್ಮಾಣ ಮಾಡುವುದಕ್ಕೆ ಕೆಲವು ಕಾರ್ಯವಿಧಾನವಿದೆ. ಆದ್ರೆ ಅಂತ್ಯಕ್ರಿಯು ಕಾಯಲು ಸಾಧ್ಯವಿಲ್ಲದ ಪ್ರಕ್ರಿಯೆಯಾಗಿದೆ. ಆದ್ದರಿಂದಲೇ ಬೋಧ್ ಘಾಟ್‌ನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.
Advertisement
ರಾಹುಲ್ ಗಾಂಧಿ ಹೇಳಿದ್ದೇನು?
ಭಾರತಮಾತೆಯ ಮಹಾನ್ ಪುತ್ರ ಹಾಗೂ ಸಿಖ್ ಸಮುದಾಯದ ಮೊದಲ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರವನ್ನು ನಿಗಮಬೋಧ್ ಘಾಟ್‌ನಲ್ಲಿ ನೆರವೇರಿಸುವ ಮೂಲಕ ಪ್ರಸ್ತುತ ಸರ್ಕಾರ ಅವರಿಗೆ ಸಂಪೂರ್ಣ ಅವಮಾನ ಮಾಡಿದೆ. ಮನಮೋಹನ್ ಸಿಂಗ್ ಒಂದು ದಶಕದ ಕಾಲ ಭಾರತದ ಪ್ರಧಾನಿಯಾಗಿದ್ದರು. ಅವರ ಅಧಿಕಾರಾವಧಿಯಲ್ಲಿ ದೇಶವು ಆರ್ಥಿಕ ಮಹಾಶಕ್ತಿಯಾಯಿತು ಮತ್ತು ಅವರ ನೀತಿಗಳು ಇನ್ನೂ ದೇಶದ ಬಡ ಮತ್ತು ಹಿಂದುಳಿದ ವರ್ಗಗಳಿಗೆ ಬೆಂಬಲ ನೀಡುತ್ತಿವೆ.
ಇಲ್ಲಿಯವರೆಗೆ, ಎಲ್ಲಾ ಮಾಜಿ ಪ್ರಧಾನಿಗಳ ಘನತೆಯನ್ನು ಗೌರವಿಸಿ, ಅವರ ಅಂತಿಮ ವಿಧಿಗಳನ್ನು ಅಧಿಕೃತ ಸಮಾಧಿಗಳಲ್ಲಿ ನಡೆಸಲಾಯಿತು, ಇದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಯಾವುದೇ ಅನಾನುಕೂಲತೆ ಇಲ್ಲದೇ ಗೌರವ ಸಲ್ಲಿಸಬದಾಗಿದೆ. ಹಾಗೆಯೇ ದೇಶದ ಈ ಮಹಾನ್ ಪುತ್ರ ಮತ್ತು ಅವರ ಸಮುದಾಯದ ಬಗ್ಗೆ ಸರ್ಕಾರ ಗೌರವ ತೋರಿಸಬೇಕಿತ್ತು. ಆದ್ರೆ ಸಂಪೂರ್ಣ ಅಪಮಾನ ಮಾಡಿದೆ ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.