ಲಕ್ನೋ: ಕಾಂಗ್ರೆಸ್ ಮತ್ತು ಪಂಜಾಬ್ ಮುಖ್ಯಮಂತ್ರಿ ಮತಕ್ಕಾಗಿ ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ.
Advertisement
ಉತ್ತರ ಪ್ರದೇಶ, ಬಿಹಾರದ ಜನರನ್ನು ಪಂಜಾಬ್ ಪ್ರವೇಶಿಸಲು ಬಿಡಬೇಡಿ ಎಂದು ಪಂಜಾಬ್ ಸಿಎಂ ಚರಣ್‍ಜಿತ್ ಸಿಂಗ್ ಚನ್ನಿ ವಾಗ್ದಾಳಿ ನಡೆಸಿದ್ದರು. ಈ ಹೇಳಿಕೆಗೆ ಬಿಜೆಪಿ ವ್ಯಾಪಕ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೇ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರೂ ಚನ್ನಿ ಹೇಳಿಕೆಯನ್ನು ಟೀಕಿಸಿದ್ದಾರೆ. ಯಾವುದೇ ವ್ಯಕ್ತಿ ಅಥವಾ ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಮೆಂಟ್ ಮಾಡುವುದನ್ನು ಖಂಡಿಸುತ್ತೇನೆ. ಪ್ರಿಯಾಂಕಾ ಗಾಂಧಿ ಕೂಡ ಉತ್ತರ ಪ್ರದೇಶಕ್ಕೆ ಸೇರಿದವರು. ಆದ್ದರಿಂದ ಅವರನ್ನು ಬರಲು ಬಿಡಬಾರದು ಎಂದು ವಾಗ್ದಾಳಿ ನಡೆಸಿದ್ದರು.
Advertisement
Advertisement
ಇದೀಗ ಸಂದರ್ಶನವೊಂದರಲ್ಲಿ ಯೋಗಿ ಆದಿತ್ಯನಾಥ್ ಅವರು ಗಾಂಧಿ ಮತ್ತು ನೆಹರು ಹೆಸರಿನಲ್ಲಿ ದೇಶಕ್ಕೆ ಪದೇ, ಪದೇ ದ್ರೋಹ ಮಾಡಲಾಗುತ್ತಿದೆ. ಜಾತಿವಾದ, ಪ್ರಾದೇಶಿಕತೆ, ಭಾಷಾವಾದ, ಭಯೋತ್ಪಾದನೆ, ನಕ್ಸಲಿಸಂ ಇವೆಲ್ಲವೂ ಭಾರತಕ್ಕೆ ಕಾಂಗ್ರೆಸ್ ನೀಡಿದ ಗಾಯಗಳಾಗಿವೆ ಮತ್ತು ಕಾಂಗ್ರೆಸ್ ಇಂದು ತಾನು ಬಿತ್ತಿದ್ದನ್ನು ಕೊಯ್ಯುತ್ತಿದೆ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಯುಪಿ, ಬಿಹಾರದ ಜನತೆಗೆ ಪಂಜಾಬ್ ಪ್ರವೇಶಿಸಲು ಬಿಡಬೇಡಿ: ಚನ್ನಿ ವಿರುದ್ಧ ಬಿಜೆಪಿ, ಆಪ್ ಕೆಂಡ
Advertisement
ಉತ್ತರ ಪ್ರದೇಶ, ಬಿಹಾರದ ಜನರನ್ನು ಪಂಜಾಬ್ ಪ್ರವೇಶಿಸಲು ಬಿಡಬೇಡಿ ಎಂದು ಚರಣ್‍ಜಿತ್ ಸಿಂಗ್ ಚನ್ನಿ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಪಂಜಾಬ್ ಸಿಎಂ ರವಿದಾಸ್ ಜಯಂತಿ ಪ್ರಯುಕ್ತ ವಾರಣಾಸಿಗೆ ಬಂದಿದ್ದರು. ಅವರು ಸಂತ ರವಿದಾಸ್ ಅವರಿಂದ ಸ್ವಲ್ಪ ಸ್ಫೂರ್ತಿ ಪಡೆದಿದ್ದರೆ, ಅಂತಹ ನಕಾರಾತ್ಮಕ ಹೇಳಿಕೆಗಳನ್ನು ನೀಡುತ್ತಿರಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ತಾಜ್ ಮಹಲ್‌ನಲ್ಲಿ ಹನುಮಾನ್ ಚಾಲೀಸಾ – ಪ್ರತಿಭಟನಕಾರರನ್ನು ತಡೆದ ಪೊಲೀಸರು