ನವದೆಹಲಿ: ಚುನಾವಣೆಗಾಗಿ ಮಾಡುವ ಘೋಷಣೆ ಎಷ್ಟರ ಮಟ್ಟಿಗೆ ತೊಂದರೆ ಕೊಡುತ್ತವೆ ಎನ್ನುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಗ್ಯಾರಂಟಿಗಳೇ ಸಾಕ್ಷಿ. ರಾಜ್ಯ ಸರ್ಕಾರದ ಈ ತೊಳಲಾಟವನ್ನು ಬಹಿರಂಗವಾಗಿ ಹೇಳಿರುವ ಡಿಸಿಎಂ ಡಿ.ಕೆ ಶಿವಕುಮಾರ್ (DCM DK Shivakumar) ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಕೇಂದ್ರ ರೈಲ್ವೆ, ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ಹೇಳಿದ್ದಾರೆ.
ದೆಹಲಿಯಲ್ಲಿ (Delhi) ಮಾಧ್ಯಮದವರೊಂದಿಗೆ ಶಕ್ತಿ ಯೋಜನೆ ಪರಿಷ್ಕರಣೆ ಬಗ್ಗೆ ಡಿಸಿಎಂ ಡಿಕೆಶಿ ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಸಿಲ್ಲದೇ ಕರಿಮಣಿ ಹೊಲಿಸಿಕೊಂಡಿದ್ದಾರೆ. ಕೂಸು ಹುಟ್ಟುವ ಮುನ್ನ ಕುಲಾಯಿ ಹೊಲಿಸಿಕೊಂಡ ಹಾಗೇ ಈ ಗ್ಯಾರಂಟಿ ಯೋಜನೆಗಳು. ಚುನಾವಣೆಗಾಗಿ ಗ್ಯಾರಂಟಿ ನೀಡಿ ಈಗ ಪರಿತಪಿಸುತ್ತಿದ್ದಾರೆ. ದೇಶದ ವ್ಯವಸ್ಥೆಯಲ್ಲಿ, ರಾಜ್ಯದ ಪಾಲುದಾರಿಕೆಯಲ್ಲಿ ಇತಿಮಿತಿಯಲ್ಲಿ ಸರ್ಕಾರ ನಡೆಸಬೇಕು. ಸಿಎಂ ಸಿದ್ದರಾಮಯ್ಯ (CM Siddaramaiah), ಎಲ್ಲ ಮಂತ್ರಿಗಳು ಮತ್ತು ಕಾಂಗ್ರೆಸ್ (Congress) ಎಲ್ಲ ನಾಯಕರ ಭಾವನೆಯೂ ಇದೆ ಆಗಿದೆ. ಹೊಟ್ಟೆಯಲ್ಲಿರುವ ನೋವನ್ನು ಡಿಕೆಶಿ ಹೇಳಿಕೊಂಡಿದ್ದಾರೆ. ಹೀಗಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದರು.ಇದನ್ನೂ ಓದಿ: ವಿಜಯ್ ದೇವರಕೊಂಡ ಮನೆಯಲ್ಲಿ ದೀಪಾವಳಿ ಹಬ್ಬ ಆಚರಿಸಿದ ರಶ್ಮಿಕಾ
Advertisement
Advertisement
ನವೆಂಬರ್ ಬಳಿಕ ಗ್ಯಾರಂಟಿಗಳಿಗೆ ಜನ ಗಣ ಮನ ಹಾಡುತ್ತಾರೆ. ರಾಜ್ಯ ಕಾಂಗ್ರೆಸ್ ನಾಯಕರ ಬಣ, ರಾಜಕೀಯ ಹಿನ್ನೆಲೆ ಕುರಿತು ಕಾಂಗ್ರೆಸ್ ನಾಯಕರ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಹಿರಂಗ ಟೀಕೆ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಮಾತನಾಡಿ, ಖರ್ಗೆ ಅವರು ಹಿರಿಯ ರಾಜಕಾರಣಿ, ಅವರ ಅನುಭವ ಹಂಚಿಕೊಂಡಿದ್ದಾರೆ. ಆದರೆ ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕೈಯಿಂದ ಆಗದ ಕೆಲಸ ಖರ್ಗೆ ಅವರಿಂದ ಆಗುತ್ತಾ? ಇದನ್ನು ನೀವೇ ಯೋಚನೆ ಮಾಡಬೇಕು. ಖರ್ಗೆ ಅವರು ಏನೇ ಹೇಳಿದರೂ ನಾಯಿ ಬಾಲ ಡೊಂಕು ಎಂದು ವ್ಯಂಗ್ಯವಾಡಿದರು.
Advertisement
ಕಾಂಗ್ರೆಸ್ ಸರ್ಕಾರ ಪತನವಾಗುವ ಬಗ್ಗೆ ಹೆಚ್‌ಡಿಕೆ (HD Kumaraswamy) ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಹೆಚ್‌ಡಿ ಕುಮಾರಸ್ವಾಮಿ ಅವರ ಅನುಭವ ಹಂಚಿಕೊಂಡಿದ್ದಾರೆ. ಎರಡು ಬಾರಿ ಸಿಎಂ ಆಗಿದ್ದವರು, ಮಾಜಿ ಪ್ರಧಾನಿ ದೇವೇಗೌಡರ ಗರಡಿಯಲ್ಲಿ ಬೆಳೆದವರು, ಅವರಿಗೆ ಯಾವ ರೀತಿಯ ಮಾಹಿತಿ ಇದೆ ಗೊತ್ತಿಲ್ಲ. ಅವರು ಹೇಳಿದ್ದು ಆಗಬಹುದು, ಆಗದಿರಬಹುದು. ಕಾಂಗ್ರೆಸ್ ಡೋಲಾಮಾನಯ ಸ್ಥಿತಿಯಲ್ಲಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಏನಾದರೂ ಕೆಲಸ ಆಗುತ್ತಿದೆಯೇ? ಮಳೆ ಬಂದು ಪ್ರವಾಹ ಆದರೂ ಯಾರಾದರೂ ಮಂತ್ರಿ ಹೋಗಿ ಪರಿಶೀಲನೆ ಮಾಡಿದ್ದಾರಾ? ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ, ನಾನು ದೊಡ್ಡವನು ಎನ್ನುವ ಮನಸ್ಥಿತಿ ಬಂದಿದೆ. ಕಾಂಗ್ರೆಸ್ ಸರ್ಕಾರ ಇದೆ ಎನ್ನುವುದಕ್ಕಿಂತ, ವ್ಯಕ್ತಿಗತ ಸರ್ಕಾರ ಇದೆ ಎನ್ನುವ ಭಾವನೆ ಇದೆ. ಎಷ್ಟು ವರ್ಷ ಇರುತ್ತಾರೋ ಗೊತ್ತಿಲ್ಲ. ಪಾಪದ ವ್ಯವಸ್ಥೆ ಆದಾಗ ಇಂತಹ ಪರಿಸ್ಥಿತಿ ಬರುತ್ತದೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಬೆನ್ನುನೋವಿನ ಚಿಕಿತ್ಸೆಗಾಗಿ ಬಿಜಿಎಸ್ ಆಸ್ಪತ್ರೆಯತ್ತ ದರ್ಶನ್ – ಆಸ್ಪತ್ರೆ ಸುತ್ತಲೂ ಬಿಗಿ ಭದ್ರತೆ