ನವದೆಹಲಿ: ಭಾರತವು ಭಯೋತ್ಪಾದನೆ ಮುಕ್ತ ಪ್ರದೇಶವನ್ನು ಬಯಸುತ್ತದೆ ಎಂದು ನೂತನವಾಗಿ ಆಯ್ಕೆಯಾದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದರು.
ಟ್ವೀಟ್ನಲ್ಲಿ ಏನಿದೆ?: ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾದ ಮಹಮ್ಮದ್ ಶೆಹಬಾಜ್ ಷರೀಫ್ ಅವರಿಗೆ ಅಭಿನಂದನೆಗಳು. ಭಾರತವು ಭಯೋತ್ಪಾದನೆ ನೆರಳು ಇಲ್ಲದೇ, ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ. ಇದರಿಂದ ನಾವು ನಮ್ಮ ಅಭಿವೃದ್ಧಿ ಸವಾಲುಗಳ ಮೇಲೆ ಕೇಂದ್ರೀಕರಿಸಬಹುದು. ಜೊತೆಗೆ ನಮ್ಮ ಜನರ ಯೋಗಕ್ಷೇಮ ಮತ್ತು ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಬಹುದು ಎಂದು ತಿಳಿಸಿದರು.
Advertisement
Congratulations to H. E. Mian Muhammad Shehbaz Sharif on his election as the Prime Minister of Pakistan. India desires peace and stability in a region free of terror, so that we can focus on our development challenges and ensure the well-being and prosperity of our people.
— Narendra Modi (@narendramodi) April 11, 2022
ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಅಧ್ಯಕ್ಷ ಮತ್ತು ವಿರೋಧ ಪಕ್ಷದ ಮಾಜಿ ನಾಯಕ ಶೆಹಬಾಜ್ ಷರೀಫ್ ಅವರು ರಾಷ್ಟ್ರೀಯ ಅಸೆಂಬ್ಲಿಯಿಂದ 174 ಮತಗಳನ್ನು ಗಳಿಸಿ ಪಾಕಿಸ್ತಾನದ 23ನೇ ಪ್ರಧಾನಿಯಾಗಿ ಆಯ್ಕೆಯಾದರು. ಇದನ್ನೂ ಓದಿ: ತಾಕತ್ತಿದ್ರೆ ಎಲ್ಲಾ ಮುಸ್ಲಿಂ ಮಹಿಳೆಯರಿಗೂ ಹಿಜಬ್ ತೊಡಿಸಿ – RSS ಮುಖಂಡ ಡಾ.ಹಣಮಂತ ಮಳಲಿ ಸವಾಲು
Advertisement
Advertisement
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ವಿಶ್ವಾಸ ಮತ ಗಳಿಸಲು ವಿಫಲವಾದ ನಂತರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದಾದ ಬಳಿಕ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಕಿರಿಯ ಸಹೋದರ ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ. ಇದನ್ನೂ ಓದಿ: ಶಿಕ್ಷಕರ ಒತ್ತಾಯಕ್ಕೆ 100 ಬಸ್ಕಿ ಹೊಡೆದ 7 ಮಂದಿ ವಿದ್ಯಾರ್ಥಿನಿಯರು – ಆಸ್ಪತ್ರೆಗೆ ದಾಖಲು