ನವದೆಹಲಿ: ಅಭಿವೃದ್ಧಿ ಮಾಡದೇ 100 ದಿನವನ್ನು ಯಶಸ್ವಿಯಾಗಿ ಪೂರೈಸಿದ ಮೋದಿ ಸರ್ಕಾರಕ್ಕೆ ಅಭಿನಂದನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2ನೇ ಬಾರಿ ಆಯ್ಕೆ ಆಗಿ ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿದೆ. ಈ ಅವಧಿಯಲ್ಲಿ ಸರ್ಕಾರದ ಬೆಳವಣಿಗೆಗಳ ಕುರಿತು ಕೇಂದ್ರ ಸರ್ಕಾರ ಪ್ರಕಟಣೆ ಬಿಡುಗಡೆ ಮಾಡಿದೆ. ಇದಕ್ಕೆ ಕಾಂಗ್ರೆಸ್ ಬಿಜೆಪಿಯ ಕಾಲೆಳೆದಿದೆ. ಸರ್ಕಾರ ಈ ನೂರು ದಿನಗಳಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ನಾಯಕತ್ವದ ಕೊರತೆ ಮತ್ತು ಸರ್ಕಾರವನ್ನು ಟೀಕಿಸುವ ಮಾಧ್ಯಮಗಳ ಕತ್ತು ಹಿಸುಕುವ ಪ್ರಯತ್ನಗಳು ನಡೆಸುತ್ತಿವೆ ಎಂದು ರಾಹುಲ್ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ:ನಮೋ 2.0ಗೆ 100 ದಿನ- ನಮ್ಮ ಸರ್ಕಾರ ಭರವಸೆಯ ಸಂಕೇತ ಎಂದ ಅಮಿತ್ ಶಾ
Advertisement
Congratulations to the Modi Govt on #100DaysNoVikas, the continued subversion of democracy, a firmer stranglehold on a submissive media to drown out criticism and a glaring lack of leadership, direction & plans where it’s needed the most – to turnaround our ravaged economy.
— Rahul Gandhi (@RahulGandhi) September 8, 2019
Advertisement
ಟ್ವೀಟ್‍ನಲ್ಲಿ ಏನಿದೆ?
ಅಭಿವೃದ್ಧಿ ಮಾಡದೆ 100 ದಿನ ಪೂರೈಸಿರುವ ಮೋದಿ ಸರ್ಕಾರಕ್ಕೆ ಅಭಿನಂದನೆಗಳು. ಪ್ರಜಾಪ್ರಭುತ್ವ ವಿರೋಧಿ ಧೋರಣೆ ಮುಂದುವರಿದಿದೆ. ಮಾಧ್ಯಮಗಳ ಧ್ವನಿ ದಮನವಾಗಿದೆ. ಯೋಜನೆಗಳ ಕೊರತೆ, ಸೂಕ್ತ ನಾಯಕತ್ವದ ಕೊರತೆ ಆರ್ಥಿಕ ಮುಗ್ಗಟ್ಟಿಗೆ ಕಾರಣವಾಗಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿ ಹರಿಹಾಯ್ದಿದ್ದಾರೆ. ಜೊತೆಗೆ ಟ್ವೀಟ್‍ನಲ್ಲಿ #100DaysNoVikas ಎಂಬ ಹ್ಯಾಶ್ ಟ್ಯಾಗ್ ಕೂಡ ಹಾಕಿದ್ದಾರೆ.