– ಮೋದಿ ದೂರದೃಷ್ಟಿಯಿಂದ ಡಬಲ್ ಇಂಜಿನ್ ಸರ್ಕಾರ ರಾಜ್ಯವನ್ನು ಎತ್ತರಕ್ಕೆ ಕೊಂಡೊಯ್ಯಲಿದೆ
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ (Maharashtra Election Results) ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟದ ಐತಿಹಾಸಿಕ ಗೆಲುವಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಖುಷಿ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಮಹಾರಾಷ್ಟ್ರದ ಜನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
Advertisement
ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಮಹಾಯುತಿ ಮೈತ್ರಿಕೂಟದ ಐತಿಹಾಸಿಕ ವಿಜಯಕ್ಕಾಗಿ ಮಹಾರಾಷ್ಟ್ರದ ಜನತೆಗೆ ಹೃತ್ಪೂರ್ವಕ ಅಭಿನಂದನೆಗಳು. ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ನಾಯಕತ್ವದಲ್ಲಿ, ಬಿಜೆಪಿ-ಮಹಾಯುತಿ ನಿರಂತರವಾಗಿ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಮಹಾರಾಷ್ಟ್ರದ ಸಮಗ್ರ ಪ್ರಗತಿ ಮತ್ತು ಜನರ ಆಕಾಂಕ್ಷೆಗಳಿಗೆ ಬದ್ಧವಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮಹಾಯುತಿಗೆ 200+ ಕ್ಷೇತ್ರಗಳಲ್ಲಿ ಮುನ್ನಡೆ
Advertisement
Heartfelt congratulations to the people of Maharashtra for the historic victory of the BJP-Mahayuti alliance in the Assembly elections! Under the leadership of PM Shri @narendramodi Ji, the BJP-Mahayuti has consistently prioritized development and remains committed to…
— Nitin Gadkari (@nitin_gadkari) November 23, 2024
Advertisement
ಪ್ರಧಾನಿ ಮೋದಿ ಅವರ ದೂರದೃಷ್ಟಿಯಿಂದ ಪ್ರೇರಿತವಾದ ಡಬಲ್ ಇಂಜಿನ್ ಸರ್ಕಾರವು ರಾಜ್ಯದ ಬೆಳವಣಿಗೆಯನ್ನು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ನಾನು ದೃಢವಾಗಿ ನಂಬುತ್ತೇನೆ. ಈ ಮಹೋನ್ನತ ಸಾಧನೆಗಾಗಿ ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ಜಿ.ಪಿ.ನಡ್ಡಾ, ಸಿಎಂ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರು ಮತ್ತು ಬಿಜೆಪಿ ನಾಯಕರು ಹಾಗೂ ಮಹಾಯುತಿ ಕಾರ್ಯಕರ್ತರಿಗೆ ನನ್ನ ಪ್ರಾಮಾಣಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
Advertisement
ಮತದಾರರಲ್ಲಿ ಜಾಗೃತಿ ಮೂಡಿಸಲು ಚುನಾವಣಾ ಸಮಯದಲ್ಲಿ ಅವಿರತವಾಗಿ ಶ್ರಮಿಸಿದ ಸ್ವಯಂಸೇವಾ ಸಂಸ್ಥೆಗಳಿಗೆ ನಾನು ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದು ಗಡ್ಕರಿ ಪೋಸ್ಟ್ ಹಾಕಿದ್ದಾರೆ. ಇದನ್ನೂ ಓದಿ: Maharashtra Election Results: ಬಿಷ್ಣೋಯ್ ಗ್ಯಾಂಗ್‌ನಿಂದ ಹತ್ಯೆಯಾಗಿದ್ದ ಬಾಬಾ ಸಿದ್ದಿಕಿ ಪುತ್ರನಿಗೆ ಹಿನ್ನಡೆ
ಸದ್ಯದ ಅಂಕಿಅಂಶಗಳ ಪ್ರಕಾರ, ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ+ 225, ಕಾಂಗ್ರೆಸ್+ 53 ಹಾಗೂ ಇತರೆ 10 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.