– ಮೊದಲ ಪಟ್ಟಿಯಲ್ಲಿ ಕರ್ನಾಟದ 7 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ
ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು (Congress 1st Lok Sabha List) ಶುಕ್ರವಾರ ಬಿಡುಗಡೆಗೊಳಿಸಿದೆ.
ರಾಹುಲ್ ಗಾಂಧಿ (Rahul Gandhi), ಕೆ.ಸಿ ವೇಣುಗೋಪಾಲ್, ಶಶಿ ತರೂರ್ ಸೇರಿದಂತೆ ಒಟ್ಟು 9 ರಾಜ್ಯಗಳ 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಕರ್ನಾಟಕದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿದೆ.
ನಿರೀಕ್ಷೆಯಂತೆ ನಟ ಶಿವರಾಜ್‌ಕುಮಾರ್ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಅವರಿಗೆ ಟಿಕೆಟ್ ನೀಡಲಾಗಿದ್ದು, ಶಿವಮೊಗ್ಗದಿಂದ ಕಣಕ್ಕಿಳಿಯಲಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಹಾಲಿ ಸಂಸದ ಡಿ.ಕೆ ಸುರೇಶ್ (DK Suresh) ಮತ್ತೆ ಕಣಕ್ಕಿಳಿಯಲಿದ್ದು, ಬಿಜೆಪಿ ನಡುವೆ ಪ್ರಬಲ ಪೈಪೋಟಿಯ ನಿರೀಕ್ಷೆಯಿದೆ.
ಯಾವ ಕ್ಷೇತ್ರದಿಂದ ಯಾರು ಕಣಕ್ಕೆ?
ವಿಜಯಪುರ (SC) – ಹೆಚ್.ಆರ್. ಅಲ್ಗೂರು (ರಾಜು)
ಹಾವೇರಿ – ಆನಂದಸ್ವಾಮಿ ಗಡ್ಡದೇವರಮಠ
ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್
ಹಾಸನ – ಎಂ. ಶ್ರೇಯಸ್ ಪಟೇಲ್
ತುಮಕೂರು – ಎಸ್.ಪಿ ಮುದ್ದಹನುಮೇಗೌಡ
ಮಂಡ್ಯ – ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್