– ಕೇರಳದಲ್ಲೇ ಘಟಾನುಘಟಿಗಳ ಸ್ಪರ್ಧೆ
ನವದೆಹಲಿ: 2024ರ ಲೋಕಸಮರಕ್ಕೆ ಕಾಂಗ್ರೆಸ್ ಮೊದಲ ಅಭ್ಯರ್ಥಿಗಳ ಪಟ್ಟಿ (Congress 1st Lok Sabha List) ಬಿಡುಗಡೆ ಆಗಿದ್ದು, ಈ ಬಾರಿಯೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಇತ್ತೀಚೆಗಷ್ಟೇ ಉತ್ತರ ಪ್ರದೇಶದ (Uttar Pradesh) ಕಾಂಗ್ರೆಸ್ ಭದ್ರಕೋಟೆ ರಾಯ್‌ಬರೇಲಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi) ಹಾಗೂ ಅಮೇಥಿ ಕ್ಷೇತ್ರದಿಂದ ಮತ್ತೆ ರಾಹುಲ್ ಗಾಂಧಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ರಾಹುಲ್ ಗಾಂಧಿ ಬಿಗ್ ಫೈಟ್ ಕೊಡಲಿದ್ದಾರೆ ಎಂದು ಹೇಳಲಾಗಿತ್ತು. ಆದ್ರೆ ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ಟ್ ಟ್ವಿಸ್ಟ್ ಕೊಟ್ಟಿದ್ದು, ರಾಹುಲ್ ಗಾಂಧಿ ಅವರಿಗೆ ಕೇರಳದ ವಯನಾಡಿನಿಂದಲೇ ಟಿಕೆಟ್ ಘೋಷಣೆ ಮಾಡಲಾಗಿದೆ. 2ನೇ ಪಟ್ಟಿಯಲ್ಲಿ ಪ್ರಿಯಾಂಕ ಗಾಂಧಿ ಅವರಿಗೆ ಕ್ಷೇತ್ರ ನಿಗದಿಪಡಿಸುವ ವಿಶ್ವಾಸವನ್ನು ಕಾಂಗ್ರೆಸ್ ನಾಯಕರು ವ್ಯಕ್ತಪಡಿಸಿದ್ದಾರೆ.
Advertisement
Advertisement
4 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದುಬೀಗಿದ್ದ ರಾಗಾ:
2019ರ ಚುನಾವಣೆಯಲ್ಲಿ ವಯನಾಡಿನಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ 10,92,197 ಮತಗಳನ್ನು ಪಡೆದುಕೊಂಡಿದ್ದರು. ಈ ಮೂಲಕ 4,31,770 ಮತಗಳ ಅಂತರದಿಂದ (ಶೇಕಡವಾರು ಮತ 39.5%) ಗೆಲುವು ಸಾಧಿಸಿದ್ದರು. ಕೇರಳದ ಜತೆ ಮೇಲೆ ವಿಶ್ವಾಸ ಇಟ್ಟಿರುವ ರಾಗಾ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅಲ್ಲದೇ ಕೇರಳದ ಅಲಪ್ಪುಳ ಕ್ಷೇತ್ರದಿಂದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ (KC Venugopal), ತಿರುವನಂತಪುರಂನಿಂದ ಡಾ.ಶಶಿ ತರೂರ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಫೇಲ್ ಅವರನ್ನು ರಾಜನಾನಂದಗಾಂವ್‌ನಿಂದ ಕಣಕ್ಕಿಳಿಸುವುದಾಗಿ ಘೋಷಣೆ ಮಾಡಿದೆ.
Advertisement
Advertisement
ಕರ್ನಾಟದಲ್ಲಿ ಯಾರ್ಯಾರಿಗೆ ಟಿಕೆಟ್?
ಕರ್ನಾಟಕದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್, ತುಮಕೂರಿನಿಂದ ಮುದ್ದ ಹನುಮೇಗೌಡ, ವಿಜಯಪುರದಿಂದ ಎಸ್.ಆರ್. ಅಲಗೂರ, ಹಾವೇರಿಯಿಂದ ಆನಂದಸ್ವಾಮಿ ಗಡ್ಡದವೇರಮಠ, ಶಿವಮೊಗ್ಗದಿಂದ ಗೀತಾ ಶಿವರಾಜ್‌ಕುಮಾರ್, ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ ಸುರೇಶ್ ಹಾಗೂ ಹಾಸನದಿಂದ ಶ್ರೇಯಸ್ ಪಟೇಲ್, ಮಂಡ್ಯದಿಂದ ವೆಂಕಟರಮಣಗೌಡ (ಸ್ಟಾರ್ ಚಂದ್ರು) ಹೆಸರನ್ನು ಪಕ್ಷ ಫೈನಲ್ ಮಾಡಿದೆ. ಇದನ್ನೂ ಓದಿ: Loksabha Elections 2024- ಕಾಂಗ್ರೆಸ್‌ನಿಂದ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಉಳಿದಂತೆ ಛತ್ತೀಸಗಢ 6, ಕೇರಳ- 16, ಲಕ್ಷದ್ವೀಪ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ಕ್ಷೇತ್ರಗಳಿಂದ ತಲಾ 1, ಮೇಘಾಲಯ 2, ತೆಲಂಗಾಣದಿಂದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
ಮೊದಲ ಪಟ್ಟಿ ಪ್ರಕಟಿಸಿದ ಬಳಿಕ ಮಾತನಾಡಿದ ಕೆ.ಸಿ.ವೇಣುಗೋಪಾಲ್ ಮಾತನಾಡಿ, ಸಾಮಾಜಿಕ ನ್ಯಾಯದ ಅಡಿಯಲ್ಲಿ 15 ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ಒಟ್ಟು 24 ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Congress 1st Lok Sabha List: ಶಿವಮೊಗ್ಗದಿಂದ ದೊಡ್ಮನೆ ಸೊಸೆ ಕಣಕ್ಕೆ!