ಮಂಡ್ಯ: ಅನುದಾನ ಹಂಚಿಕೆಯಲ್ಲಿ ಜೆಡಿಎಸ್ ಪಕ್ಷದ ಸದಸ್ಯರು ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಸದಸ್ಯರು ಮಂಡ್ಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ.
Advertisement
ಮಂಡ್ಯ ಜಿಲ್ಲಾ ಪಂಚಾಯತಿಯಲ್ಲಿ ಜೆಡಿಎಸ್ ಪಕ್ಷಕ್ಕೆ ಬಹುಮತವಿದೆ. ಅನುದಾನ ಹಂಚಿಕೆ ವಿಷಯ ಬಂದಾಗ ಜೆಡಿಎಸ್ ಪಕ್ಷದವರು ನಾವು ಬಹುಮತವಿದ್ದೇವೆ ಎಂದು ಹೆಚ್ಚಿನ ಅನುದಾನ ಇಟ್ಟುಕೊಂಡು ಕಾಂಗ್ರೆಸ್ ಪಕ್ಷದ ಸದಸ್ಯರಿಗೆ ಕಡಿಮೆ ಅನುದಾನ ನೀಡುತ್ತಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆ ಇಬ್ಬರಿಂದ ಸೇರಿ ಸುಮಾರು ಒಂದು ಕೋಟಿ ಅನುದಾನ ಇಟ್ಟುಕೊಂಡಿದ್ದಾರೆ. ಆದರೆ ನಮಗೆ ಮಾತ್ರ ತಲಾ 3-5 ಲಕ್ಷ ಅನುದಾನ ನೀಡುತ್ತಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಕಾಂಗ್ರೆಸ್‍ನ 12 ಜನ ಜಿಲ್ಲಾಪಂಚಾಯಿತಿ ಸದಸ್ಯರು, ಮಂಡ್ಯ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿರುವ ಕಾವೇರಿ ಸಭಾಂಗಣದಲ್ಲಿ ಅಹೋರಾತ್ರಿ ಧರಣಿ ನಡೆಸಿದರು.
Advertisement
Advertisement
ಅನುದಾನ ಹಂಚಿಕೆ ತಾರತಮ್ಯದಿಂದ ಕ್ಷೇತ್ರ ಅಭಿವೃದ್ಧಿ ಕಷ್ಟವಾಗಿದೆ. ಮತದಾರರ ಪ್ರಶ್ನೆಗೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದರು. ಧರಣಿಯಲ್ಲಿ ಪಾಲ್ಗೊಂಡ ಒಟ್ಟು 12 ಜನ ಸದಸ್ಯರಲ್ಲಿ 6 ಮಂದಿ ಮಹಿಳಾ ಸದಸ್ಯರಿದ್ದು ಎಲ್ಲರೂ ಕೂಡ ಮನೆಗೆ ಹೋಗದೇ ಕಾವೇರಿ ಸಭಾಂಗಣದಲ್ಲೇ ರಾತ್ರಿಯೆಲ್ಲ ಧರಣಿ ನಡೆಸಿ ಜೆಡಿಎಸ್ ಪಕ್ಷದ ಸದಸ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದರು.