ಮುಂಬೈ: ಸಮ್ಮಿಶ್ರ ಸರ್ಕಾರ ವಿರುದ್ಧ ಅಸಮಾಧಾನಗೊಂಡಿರುವ ಶಾಸಕರು ರಾಜೀನಾಮೆ ನೀಡಿ ಮುಂಬೈನ ಸೊಫಿಟೆಲ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬಿಜೆಪಿ ಶಾಸಕರನ್ನು ಖರೀದಿಸುವ ಮೂಲಕ ಕರ್ನಾಟಕದಲ್ಲಿ ಮೈತ್ರಿ ಸರ್ಕಾರವನ್ನು ಉರುಳಿಸಲು ಪ್ಲಾನ್ ಮಾಡಿಕೊಂಡಿದೆ ಎಂದು ಆರೋಪಿಸಿ ಮುಂಬಯಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Advertisement
ಇಂದು ಸಂಜೆ 5 ಗಂಟೆಗೆ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಮತ್ತು ಪ್ರಧಾನಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯ ಬಿಸಿ ಹೆಚ್ಚಾಗುತ್ತಿದ್ದಂತೆ ಹೋಟೆಲ್ ಸುತ್ತಮುತ್ತ ಹೆಚ್ಚಿನ ಭದ್ರತೆ ನೀಡಲಾಗಿದೆ. ಪ್ರತಿಭಟನೆಯಿಂದಾಗಿ ಹೋಟೆಲ್ ಮುಂಭಾದಲ್ಲಿ ಟ್ರಾಫಿಕ್ ಉಂಟಾಗಿದ್ದರಿಂದ ಸವಾರರು ಪರದಾಡುವಂತಾಯ್ತು.
Advertisement
आता पश्चिम बंगाल व कर्नाटक मध्ये तेच करण्याचा भाजपचा प्रयत्न सुरु आहे.
केंद्र सरकारबरोबरच कर्नाटक सरकार पाडण्यासाठी महाराष्ट्रातील फडणवीस सरकारही प्रयत्न करत आहे. राज्यातील प्रमुख मंत्री जनतेचे प्रश्न सोडवण्याऐवजी कर्नाटक सरकार पाडण्याच्या कामात व्यस्त आहेत.
— Maharashtra Congress (@INCMaharashtra) July 7, 2019
Advertisement
ಗೋಕಾಕ್ನ ರಮೇಶ್ ಜಾರಕಿಹೊಳಿ, ಹಿರೇಕೆರೂರಿನ ಬಿ.ಸಿ. ಪಾಟೀಲ್, ಮಸ್ಕಿಯ ಪ್ರತಾಪ್ಗೌಡ ಪಾಟೀಲ್, ಯಲ್ಲಾಪುರದ ಶಿವರಾಮ್ ಹೆಬ್ಬಾರ್, ಅಥಣಿಯ ಮಹೇಶ್ ಕುಮಟಳ್ಳಿ, ಹುಣಸೂರಿನ ಎಚ್. ವಿಶ್ವನಾಥ್, ಕೆ.ಆರ್.ಪೇಟೆಯ ನಾರಾಯಣಗೌಡ, ಮಹಾಲಕ್ಷ್ಮಿ ಲೇಔಟ್ನ ಗೋಪಾಲಯ್ಯ, ಬಿಟಿಎಂ ಲೇಔಟ್ನ ರಾಮಲಿಂಗಾರೆಡ್ಡಿ, ಯಶವಂತಪುರದ ಎಸ್.ಟಿ ಸೋಮಶೇಖರ್, ಕೆ.ಆರ್. ಪುರಂನ ಭೈರತಿ ಬಸವರಾಜ್ ರಾಜೀನಾಮೆ ನೀಡಿ ಮುಂಬೈನ ಸೊಫಿಟೆಲ್ ಹೋಟೆಲ್ ನಲ್ಲಿ ಉಳಿದುಕೊಂಡಿದ್ದಾರೆ. ಆದರೆ ಆರ್.ಆರ್ ನಗರದ ಮುನಿರತ್ನ, ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ ಹಾಗೂ ವಿಜಯನಗರದ ಆನಂದ ಸಿಂಗ್ ಅವರು ರಾಜೀನಾಮೆ ನೀಡಿದ್ದರೂ ಮುಂಬೈಗೆ ಹೋಗಿಲ್ಲ.