Saturday, 21st July 2018

Recent News

ಮುನಿಯಾಲು ಉದಯ್ ಕುಮಾರ್ ಶೆಟ್ಟಿಗೆ ತಪ್ಪಿದ ಕೈ ಟಿಕೆಟ್- ಕಾರ್ಯಕರ್ತ ಆತ್ಮಹತ್ಯೆಗೆ ಯತ್ನ

ಉಡುಪಿ: ಕಾರ್ಕಳ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರಿಗೆ ಈ ಬಾರಿ ಹೈಕಮಾಂಡ್ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕಾರ್ಯಕರ್ತನೊಬ್ಬ ಇಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಉದಯ್ ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡ ಕಾಂಗ್ರೆಸ್ ಕಾರ್ಯಕರ್ತರು ಇಂದು ಹೆಬ್ರಿಯಲ್ಲಿ ಪ್ರತಿಭಟನೆ ನಡೆಸಿದರು. ಉದಯಕುಮಾರ್ ಶೆಟ್ಟಿ ಬೆಂಬಲಿಗರು ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕಾರ್ಯಕರ್ತ ಆಸಿಫ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನೂ ಓದಿ: ಕಾರ್ಕಳ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ- ವೀರಪ್ಪ ಮೊಯ್ಲಿ ವಿರುದ್ಧ ಅಸಮಾಧಾನ

ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ನೆರೆದಿದ್ದ ಇತರ ಕಾರ್ಯಕರ್ತರು ಘಟನೆಯನ್ನು ತಡೆದಿದ್ದಾರೆ. ಸೋಮವಾರವೂ ಕಾರ್ಕಳದಲ್ಲಿ ಉದಯ ಕುಮಾರ್ ಶೆಟ್ಟಿ ಬೆಂಬಲಿಗರಿಂದ ಪ್ರತಿಭಟನೆ ನಡೆದಿತ್ತು. ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಬಂದ ಟಿಕೆಟ್ ಆಕಾಂಕ್ಷಿ ಉದಯಕುಮಾರ್ ಶೆಟ್ಟಿ ಕಾರ್ಯಕರ್ತರನ್ನು ಸಮಾಧಾನಪಡಿಸಿದ್ದರು.

Leave a Reply

Your email address will not be published. Required fields are marked *