ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರದಿಂದ ಕಾಂಗ್ರೆಸ್ ಕಾರ್ಯಕರ್ತರನ್ನು ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣೆ ಪ್ರಚಾರಕ್ಕಾಗಿ ಕರೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ 500 ಕ್ಕೂ ಹೆಚ್ಚು ಕಾರ್ಯಕರ್ತರು ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯ ಪ್ರಚಾರಕ್ಕೆ ಮೈಸೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಕ್ಷೇತ್ರದ ಶಾಸಕ ಡಾ ಕೆ.ಸುಧಾಕರ್ ಕಾಂಗ್ರೆಸ್ ಕಾರ್ಯಕರ್ತರಿಗೆ 10 ವೋಲ್ವೋ ಬಸ್ ವ್ಯವಸ್ಥೆ ಮಾಡಿದ್ದಾರೆ. ಶಾಸಕರ ತಂದೆ ಹಾಗು ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೇಶವರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿಗೆ ಪ್ರಯಾಣ ಬೆಳೆಸಿದ್ದಾರೆ.
ಕಾಂಗ್ರೆಸ್ ಪಕ್ಷ ಬೆಂಬಲಿತ ನಗರಸಭಾ ಸದಸ್ಯರು, ತಾ.ಪಂ.ಸದಸ್ಯರು, ಜಿ.ಪಂ.ಸದಸ್ಯರು ಚುನವಣಾ ಪ್ರಚಾರಕ್ಕೆ ತೆರಳಿದ್ದಾರೆ. ಬರದ ನಡುವೆ ಜಿಲ್ಲೆಯ ಜನಪ್ರತಿನಿಧಿಗಳೆಲ್ಲರೂ ಚುನಾವಣಾ ಪ್ರಚಾರಕ್ಕೆ ತೆರಳುತ್ತಿರೋದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.