ರಾಯಚೂರು/ಉಡುಪಿ: ಮಧ್ಯಪ್ರದೇಶದ ಸರ್ಕಾರ 6 ಮಂದಿ ರೈತರ ಮೇಲೆ ನಡೆಸಿದ ಗೋಲಿಬಾರ್ ಪ್ರಕರಣದ ವಿರುದ್ಧ ಹಾಗು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಬಂಧನ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಹಲವೆಡೆ ರೈಲ್ ರೋಖೋ ಯತ್ನ ನಡೆಸಿದ್ದಾರೆ.
Advertisement
ಉಡುಪಿ, ರಾಯಚೂರು, ಯಾದಗಿರಿ ಸೇರಿದಂತೆ ರಾಜ್ಯದ ಹಲವೆಡೆ ಯುವ ಕಾಂಗ್ರೆಸ್ ಕಾರ್ಯಕರ್ತರು ರೈಲು ತಡೆಯಲು ಯತ್ನಿಸಿದರು. ಉಡುಪಿಯಲ್ಲಿ ಇಂದ್ರಾಣಿ ರೈಲು ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಮಂಗಳೂರು-ಮಡಗಾಂ ರೈಲನ್ನು ತಡೆಯಲು ಯತ್ನಿಸಿದರು.
Advertisement
Advertisement
ಮಧ್ಯಪ್ರದೇಶ ಸರ್ಕಾರದ ನಡೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಯಚೂರಿನಲ್ಲಿ ರೈಲ್ವೇ ನಿಲ್ದಾಣಕ್ಕೆ ನುಗ್ಗಿ ಪ್ರತಿಭಟಿಸಲು ಯತ್ನಿಸಿದರು. ಈ ವೇಳೆ 30 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದ್ಯೊಯ್ದಿದ್ದಾರೆ. ಇದಕ್ಕೂ ಮುನ್ನ ನಗರದಲ್ಲಿ ಬೈಕ್ ಮೆರವಣಿಗೆ ನಡೆಸಿ ಮಧ್ಯಪ್ರದೇಶ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
Advertisement
ಯಾದಗಿರಿಯಲ್ಲೂ ಯುವ ಕಾಂಗ್ರೆಸ್ ಕಾರ್ಯಕರ್ತರು ರೆಲ್ವೇ ನಿಲ್ದಾಣಕ್ಕೆ ನುಗ್ಗಿ ಕೋಯಿಮತ್ತೂರ್ ಕುರ್ಲಾ ಎಕ್ಸ್‍ಪ್ರೆಸ್ ರೈಲು ತಡೆಯಲು ಯತ್ನಿಸಿದಾಗ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದ್ಯೊಯ್ದಿದ್ದಾರೆ.
ದಾವಣಗೆರೆಯಲ್ಲೂ ಕೂಡ ಯೂತ್ ಕಾಂಗ್ರೆಸ್ ಕಾರ್ಯಕರ್ತರು ರೈಲು ತಡೆಗೆ ಯತ್ನಿಸಿದ್ರು.