ಉಡುಪಿ: ಸರ್ಕಾರಗಳ ವಿರುದ್ಧ ಹೋರಾಟ, ಅಖಂಡ ಭಾರತದ ಹಕ್ಕೊತ್ತಾಯ, ಸ್ವಾತಂತ್ರ ದಿನದ ನಡುರಾತ್ರಿಯಲ್ಲಿ ಹಿಂದೂ ಸಂಘಟನೆಗಳು ಬಿಜೆಪಿ ಪಂಜಿನ ಮೆರವಣಿಗೆ ಮಾಡುತ್ತವೆ. ಆದರೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಕಾಂಗ್ರೆಸ್ ಸದಸ್ಯರು ಪಂಜಿನ ಮೆರವಣಿಗೆ ಮಾಡಿ ಕರಾವಳಿಯಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದಾರೆ.
Advertisement
ಸುಪ್ರೀಂಕೋರ್ಟಿನ ಆದೇಶವನ್ನು ಪಾಲಿಸುವುದಾಗಿ ಹೇಳಿ ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಿ ರಾಜ್ಯ ಬಿಜೆಪಿ ಸರ್ಕಾರ ಪೇಚಿಗೆ ಸಿಲುಕಿದೆ. ಬಿಜೆಪಿ ಸರ್ಕಾರದ ನಡೆಯನ್ನು ಹಿಂದೂಪರ ಸಂಘಟನೆಗಳು ವಿಪಕ್ಷಗಳು ಖಂಡಿಸಿವೆ. ಘಟನೆ ವಿರೋಧಿಸಿ ಜನಜಾಗೃತಿಗಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಕಾರ್ಕಳ ಯುವ ಕಾಂಗ್ರೆಸ್ ನೇತೃತ್ವದಲ್ಲಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್, ಕಾರ್ಕಳ ನಗರ ಕಾಂಗ್ರೆಸ್ ಸಹಯೋಗದಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಿತು.
Advertisement
Advertisement
ಕಾರ್ಕಳದ ಅನಂತಶಯನ ದೇವಸ್ಥಾನದಿಂದ ವೆಂಕಟರಮಣ ದೇವಸ್ಥಾನದವರೆಗೆ ಬೃಹತ್ ಪಂಜಿನ ಮೆರವಣಿಗೆಯಲ್ಲಿ ನೂರಾರು ಕಾಂಗ್ರೆಸ್ಸಿನ ಕಾರ್ಯಕರ್ತರು ನಾಯಕರು ಪಾಲ್ಗೊಂಡರು. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಅಧಿಕಾರಿಗಳ ವಿರುದ್ಧ ಧಿಕ್ಕಾರಗಳು ಮೊಳಗಿದವು. ಕಾರ್ಕಳದಲ್ಲಿ ನಿರಂತರ ಗೋವುಗಳ ಕಳ್ಳತನ ಆಗುತ್ತಿದ್ದು ಸರಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿತು. ಇದನ್ನೂ ಓದಿ: ಬೆಂಗ್ಳೂರಲ್ಲಿ ನಿಲ್ಲದ ದೊಡ್ಡವರ ಮಕ್ಕಳ ಆಕ್ಸಿಡೆಂಟ್ – Textile ಮಾಲೀಕನ ಮಗನ ಕಾರು ಅಪಘಾತ
Advertisement
ಹಿಂದು ಧರ್ಮ, ಧಾರ್ಮಿಕ ಭಾವನೆಗಳ ವಿಚಾರದಲ್ಲಿ ರಾಜಕೀಯ ಮಾಡುವ ಬಿಜೆಪಿಯು ದೇವಸ್ಥಾನ ಧ್ವಂಸದ ವಿಚಾರದಲ್ಲಿ ಅಧಿಕಾರಿಗಳ ಮೇಲೆ ಆರೋಪ ಹೊರಿಸಿ ತಾನು ನುಣುಚಿಕೊಳ್ಳುವ ಯತ್ನವನ್ನು ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಸುಧೀರ್ ಮರೋಳಿ ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಮೊದಲ ಬಾರಿಗೆ ಪಂಜನ ಮೆರವಣಿಗೆಯನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ಹಿಂದುತ್ವ ದೇವಸ್ಥಾನ ಪಂಜಿನ ಮೆರವಣಿಗೆ ಇದೆಲ್ಲ ಬಿಜೆಪಿಗೆ ಗುತ್ತಿಗೆ ನೀಡಿಲ್ಲ ಎಂದು ಕಾಂಗ್ರೆಸ್ ನ ಕೆಲ ಸದಸ್ಯರು ಬರೆದುಕೊಂಡಿದ್ದಾರೆ.