Connect with us

Latest

ಕೈ ಬಂಡಾಯದ ಮಧ್ಯೆ ರಾಹುಲ್ ಬೆನ್ನಿಗೆ ನಿಂತ ರಮ್ಯಾ

Published

on

ನವದೆಹಲಿ: ಕಾಂಗ್ರೆಸ್ ಬಂಡಾಯದ ಮಧ್ಯೆ ಮಾಜಿ ಸಂಸದೆ ರಮ್ಯಾ ಎಂಟ್ರಿ ಕೊಟ್ಟಿದ್ದು, ಕೈ ಸಭೆಯ ಮಾಹಿತಿ ಸೋರಿಕೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ರಮ್ಯಾ, ಬಂಡಾಯಕ್ಕೆ ಕಾರಣವಾದ 23 ಮಂದಿ ಪತ್ರ ಬರೆದು ಅದನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ. ಅಲ್ಲದೆ ಕಾಂಗ್ರೆಸ್ ಸಭೆಯ ಇಂಚಿಂಚು ಮಾಹಿತಿಗಳನ್ನು ನೀಡುವ ಮೂಲಕ ಎಲ್ಲಾ ವಿಚಾರಗಳನ್ನು ಸೋರಿಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಈ ಮೂಲಕ ಮಾಜಿ ಸಂಸದೆ ರಮ್ಯಾ ರಾಹುಲ್ ಗಾಂಧಿ ಬೆನ್ನಿಗೆ ನಿಂತಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಯಾರಿಗೆ ನೀಡಬೇಕು ಎಂಬ ಮೂಲ ವಿಷಯವನ್ನು ಇಟ್ಟುಕೊಂಡು ನಡೆಯುತ್ತಿರುವ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪತ್ರ ಬಂಡಾಯದ ಬಗ್ಗೆ ಈಗ ಭಾರೀ ಚರ್ಚೆ ಆಗುತ್ತಿದೆ. ಝೂಮ್ ಅಪ್ಲಿಕೇಶನ್ ಮೂಲಕ ಈ ಸಭೆ ನಡೆಯುತ್ತಿದ್ದು, ಹಿರಿಯ ನಾಯಕರು ಭಾಗವಹಿಸಿದ್ದಾರೆ. ಸಭೆಯ ಆರಂಭದಲ್ಲೇ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ “ಹೊಸ ಅಧ್ಯಕ್ಷರನ್ನು ಹುಡುಕಿ. ನಾನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವುದಿಲ್ಲ” ಎಂದು ಹೇಳಿದ್ದಾರೆ.  ಇದನ್ನೂ ಓದಿ: ಗಾಂಧಿಯೇತರ ವ್ಯಕ್ತಿಗಳು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಲೇಬೇಕು – ಪ್ರಿಯಾಂಕಾ ಗಾಂಧಿ

ಈ ವೇಳೆ 20 ಪ್ರಮುಖರ ನಾಯಕರು ಪತ್ರ ಬರೆದ ವಿಚಾರಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅಸಮಾಧಾನ ವ್ಯಕ್ತಪಡಿಸಿದರು. ಕೋವಿಡ್ 19, ಮಧ್ಯಪ್ರದೇಶ, ರಾಜಸ್ಥಾನ ಬಿಕ್ಕಟ್ಟಿನ ಸಮಯದಲ್ಲಿ ಹಿರಿಯ ನಾಯಕರಾದವರು ಈ ರೀತಿ ಪತ್ರ ಬರೆಯುವುದು ಸರಿಯಲ್ಲ ಎಂದು ರಾಹುಲ್ ಆಕ್ಷೇಪ ವ್ಯಕ್ತಪಡಿಸಿದರು.

ಸೋನಿಯಗಾಂಧಿ ಅವರಿಗೆ ಆರೋಗ್ಯ ಸಮಸ್ಯೆ ಇದೆ. ಅವರು ಆಸ್ಪತ್ರೆ ದಾಖಲಾದ ವೇಳೆ ಪತ್ರ ಬರೆಯುವುದು ಎಷ್ಟು ಸರಿ ಎಂದು ಪ್ರಶ್ನಿಸಿ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು ಎಂಬ ಮಾಹಿತಿ ಲಭ್ಯವಾಗಿದೆ.

Click to comment

Leave a Reply

Your email address will not be published. Required fields are marked *