ಮಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಕರಾವಳಿಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‍ಡಿಪಿಐ) ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ, ಮಂಗಳೂರು ಉತ್ತರ, ಸುಳ್ಯ ವಿಧಾನಸಭಾ ಕ್ಷೇತ್ರಗಳಲ್ಲಿ ಮುಸ್ಲಿಂ ಮತ ವಿಭಜನೆಯಾಗದಂತೆ ತಡೆಯಲು ಕಾಂಗ್ರೆಸ್ ಮುಂದಾಗಿದೆ. ಇದಕ್ಕಾಗಿ ಮುಸ್ಲಿಂ ಮತಗಳನ್ನು ನೆಚ್ಚಿಕೊಂಡಿರುವ ಎಸ್‍ಡಿಪಿಐ ಅಭ್ಯರ್ಥಿಗಳನ್ನು ಈ ಬಾರಿ ಚುನಾವಣಾ ಕಣಕ್ಕಿಳಿಸದಂತೆ ಕಾಂಗ್ರೆಸ್ ತಂತ್ರ ಹೂಡಿದೆ.
Advertisement
Advertisement
ಸಚಿವ ರಮಾನಾಥ ರೈ ಪ್ರತಿನಿಧಿಸುವ ಬಂಟ್ವಾಳ ಕ್ಷೇತ್ರದಲ್ಲಿ ಎಸ್‍ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ನಾಮಪತ್ರ ಸಲ್ಲಿಸಿದ್ದರು. ಆದರೆ, ಈಗ ಎಸ್‍ಡಿಪಿಐ ಜೊತೆ ಒಳ ಒಪ್ಪಂದ ಮಾಡಿಕೊಂಡಿರುವ ಕಾಂಗ್ರೆಸ್ ಮುಖಂಡರು, ರಿಯಾಜ್ ನಾಮಪತ್ರ ಹಿಂದೆಗೆಸಲು ಮುಂದಾಗಿದ್ದಾರೆ. ಈ ವಿಚಾರವನ್ನು ಎಸ್‍ಡಿಪಿಐ ನಾಯಕರು ಒಪ್ಪಿಕೊಂಡಿದ್ದು ಬಿಜೆಪಿ ಅಭ್ಯರ್ಥಿಗಳು ಜಯ ಗಳಿಸದಂತೆ ತಡೆಯಲು ಈ ನಿರ್ಧಾರ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.
Advertisement
ಈ ಹಿನ್ನೆಲೆಯಲ್ಲಿ ಕರಾವಳಿಯ ಕ್ಷೇತ್ರಗಳಲ್ಲಿ ಈ ಬಾರಿ ನೆಕ್ ಟು ನೆಕ್ ಫೈಟ್ ಸಾಧ್ಯತೆಯಿದೆ. ಎಸ್‍ಡಿಪಿಐ ಈ ನಿರ್ಧಾರದದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದ್ದು, ಟೀಕೆಗೆ ಗುರಿಯಾಗಿದೆ.