ಚಾಮರಾಜನಗರ: ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಉರ್ತೂರು ಗ್ರಾಮದಲ್ಲಿ ನಡೆದಿದೆ.
ಕಾಂಗ್ರೆಸ್ ಶಾಸಕ ನರೇಂದ್ರ ಮುಂದೆಯೇ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಕೈ ಕಾರ್ಯಕರ್ತರು ಕಾಂಗ್ರೆಸ್‍ಗೆ ಮತ ಹಾಕಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಕೇಳಿದ್ದಾರೆ. ಅದಕ್ಕೆ ಬಿಜೆಪಿ ಕಾರ್ಯಕರ್ತರು ನಾವು ಮತ ಹಾಕಲ್ಲ ಎಂದು ಹೇಳಿದ್ದಾರೆ.
ಇಷ್ಟಕ್ಕೆ ಸುಮ್ಮನಾಗದ ಕಾಂಗ್ರೆಸ್ ಕಾರ್ಯಕರ್ತರು ಮೋದಿ ಸರ್ಕಾರ ಏನು ಮಾಡಿಲ್ಲ. ಕಾಂಗ್ರೆಸ್‍ಗೆ ವೋಟ್ ಹಾಕಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಹೇಳಿದ್ದಾರೆ. ಆಗ ಅವರು ನಿಮ್ಮ ಕಾಂಗ್ರೆಸ್ ಸರ್ಕಾರವೂ ಇಲ್ಲಿವರೆಗೂ ಏನೂ ಗುಡ್ಡೆ ಹಾಕಿಲ್ಲ, ನಾವು ವೋಟ್ ಹಾಕಲ್ಲ ಎಂದು ಹೇಳಿದರು.
ಈ ವಿಚಾರದ ಬಗ್ಗೆ ಆರಂಭದಲ್ಲಿ ಮಾತಿಗೆ ಮಾತು ಬೆಳೆದು ನಂತರ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ.