Connect with us

Bengaluru City

ತನ್ವೀರ್ ಸೇಠ್ ಕೊಲೆ ಯತ್ನ- ಟ್ವಿಟ್ಟರ್‌ನಲ್ಲಿ ಕಾಂಗ್ರೆಸ್, ಬಿಜೆಪಿ ಕೆಸರೆರಚಾಟ

Published

on

ಬೆಂಗಳೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ ರಾಜಕೀಯ ಪಾಳಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಟ್ವಿಟ್ಟರ್‌ನಲ್ಲಿ ಕೂಡ ಈ ವಿಚಾರವಾಗಿ ಕಾಂಗ್ರೆಸ್, ಬಿಜೆಪಿ ನಡುವೆ ಪರಸ್ಪರ ಕೆಸರೆರಚಾಟ ಆರಂಭವಾಗಿದೆ.

ಹೌದು. ಭಾನುವಾರ ರಾತ್ರಿ ಮೈಸೂರಿನಲ್ಲಿ ತನ್ವೀರ್ ಸೇಠ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿತ್ತು. ಆರೋಪಿ ಫರಾನ್ ತನ್ವೀರ್ ಅವರ ಕತ್ತಿಗೆ ಭಾಗಕ್ಕೆ ಚಾಕು ಇರಿದಿದ್ದನು. ಈ ಸಂಬಂಧ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, ಶಾಸಕ ತನ್ವೀರ್ ಸೇಠ್ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ರಾಜ್ಯದಲ್ಲಿ ಕುಸಿದುಬಿದ್ದಿರುವ ಶಾಂತಿ ಮತ್ತು ಸುವ್ಯವಸ್ಥೆಗೆ ಸಾಕ್ಷಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ – ಸಿಎಂ ಬಿಎಸ್‍ವೈ ಆಘಾತ

ಇತ್ತ ಸಿದ್ದರಾಮಯ್ಯ ಅವರ ಟ್ವೀಟ್‍ಗೆ ಪ್ರತಿಕ್ರಿಯಿಸಿದ ಬಿಜೆಪಿ, ಟಿಪ್ಪು ಸುಲ್ತಾನ್ ವ್ಯಾಮೋಹದಲ್ಲಿ ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹಾಳುಗೆಡವಿದ್ದು ಯಾರು ಎಂದು ಪ್ರಶ್ನಿಸಿ ಹರಿಹಾಯ್ದಿದೆ. ಈ ಮೂಲಕ ಬಿಜೆಪಿ, ಕಾಂಗ್ರೆಸ್ ನಡುವೆ ಕೆಸರೆರಚಾಟ ಶುರುವಾಗಿದೆ. ಇದನ್ನೂ ಓದಿ:ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಿದ್ದಾನೆ ಎಂದುಕೊಂಡ್ವಿ, ಆದ್ರೆ ಮಚ್ಚಿನಿಂದ ಹೊಡೆದು ಓಡಿ ಹೋದ: ಪ್ರತ್ಯಕ್ಷದರ್ಶಿ

ಸಿದ್ದರಾಮಯ್ಯ ಟ್ವೀಟ್:
ಶಾಸಕ ತನ್ವೀರ್ ಸೇಠ್ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ರಾಜ್ಯದಲ್ಲಿ ಕುಸಿದುಬಿದ್ದಿರುವ ಶಾಂತಿ ಮತ್ತು ಸುವ್ಯವಸ್ಥೆಗೆ ಸಾಕ್ಷಿ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ, ಶಿಕ್ಷಿಸುವ ಜೊತೆಗೆ ಸಾರ್ವಜನಿಕ ಜೀವನದಲ್ಲಿರುವ ಗಣ್ಯರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಬಿಜೆಪಿ ಟ್ವೀಟ್:
ಮಾನ್ಯ ಸಿದ್ದರಾಮಯ್ಯನವರೆ, ಕಳೆದ ಆರು ವರ್ಷಗಳ ಕಾಲ ತುಘಲಕ್ ದರ್ಬಾರ್ ನಡೆಸಿದ್ದು ಯಾರು? ಟಿಪ್ಪು ಸುಲ್ತಾನ್ ವ್ಯಾಮೋಹದಲ್ಲಿ ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹಾಳುಗೆಡವಿದ್ದು ಯಾರು? ನಿಮ್ಮ ಸುಳ್ಳಿನ ಪ್ರಪಂಚದಿಂದ ಆಚೆ ಬಂದು ಒಮ್ಮೆ ಕನ್ನಡಿ ನೋಡಿ, ಉತ್ತರ ದೊರಕುತ್ತದೆ ಎಂದು ಬಿಜೆಪಿ ಕರ್ನಾಟಕ ಟ್ವೀಟ್ ಮಾಡಿದೆ. ಇದನ್ನೂ ಓದಿ:ತನ್ವೀರ್ ಸೇಠ್​​ಗೆ ಸ್ಕೆಚ್ – ಸುಪಾರಿ ಬಗ್ಗೆ ಮೈಸೂರು ಪೊಲೀಸರಿಂದ ತನಿಖೆ ಆರಂಭ

ನಡೆದಿದ್ದೇನು?
ಭಾನುವಾರ ರಾತ್ರಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಬನ್ನಿ ಮಂಟಪ ಸಮೀಪದ ಪಾರ್ಟಿ ಹಾಲಿಗೆ ತಮ್ಮ ಆತ್ಮೀಯ ಮಗನ ಮದುವೆಯ ಬೀಗರೂಟಕ್ಕೆ ಆಗಮಿಸಿದ್ದರು. ಈ ವೇಳೆ ಫರಾನ್ (24) ಚಾಕುವಿನಿಂದ ಹಲ್ಲೆ ಮಾಡಿದ್ದ. ಅವರ ಕತ್ತಿಗೆ ಭಾಗಕ್ಕೆ ಚಾಕು ಹಾಕಿ ಪರಾರಿಯಾಗುತ್ತಿದ್ದ ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ನಂತರ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸೇಠ್ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.