ನವದೆಹಲಿ: ಜಮ್ಮು ಕಾಶ್ಮೀರದಲ್ಲಿ (Jammu Kashmir) 10 ವರ್ಷದ ನಂತರ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ (National Conference) ಮತ್ತು ಕಾಂಗ್ರೆಸ್ (Congress) ಮೈತ್ರಿಕೂಟವು 50 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವ ಮೂಲಕ ಸರಳ ಬಹುಮತದತ್ತ ದಾಪುಗಾಲಿಟ್ಟಿದೆ.
ಆರಂಭದಿಂದಲೂ ಎನ್‌ಸಿ ಮತ್ತು ಕಾಂಗ್ರೆಸ್ ಮುನ್ನಡೆ ಸಿಕ್ಕಿತ್ತು. ಮಧ್ಯಾಹ್ನ 12 ಗಂಟೆಯ ಟ್ರೆಂಡ್ ಪ್ರಕಾರ ಎನ್‌ಸಿ ಮತ್ತು ಕಾಂಗ್ರೆಸ್ ಮೈತ್ರಿಕೂಟ 50 ಕ್ಷೇತ್ರ, ಬಿಜೆಪಿ (BJP) 26, ಪಿಡಿಪಿ (PDP) 05, ಇತರರು 09 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
Advertisement
ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ನಡೆದ ಚುನಾವಣೆ ಇದಾಗಿರುವ ಕಾರಣ ಈ ಚುನಾವಣೆ ಮಹತ್ವ ಪಡೆದಿತ್ತು.
Advertisement
Advertisement
ಈ ಚುನಾವಣೆಯಲ್ಲಿ ಗೆದ್ದರೆ ಜಮ್ಮು ಕಾಶ್ಮೀರಕ್ಕೆ ರಾಜ್ಯಸ್ಥಾನಮಾನವನ್ನು ನೀಡುತ್ತೇವೆ ಎಂದು ಕಾಂಗ್ರೆಸ್ ಮತ್ತು ಎನ್‌ಸಿ ಘೋಷಿಸಿತ್ತು. ಅಷ್ಟೇ ಅಲ್ಲದೇ ಹಲವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತ್ತು. ಈ ಘೋಷಣೆಗಳ ಪರಿಣಾಮ ಎನ್‌ಸಿ ಮೈತ್ರಿಕೂಟ ಚುನಾವಣೆಯಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ.
Advertisement
ಚುನಾವಣೋತ್ತರ ಸಮೀಕ್ಷೆಗಳು ಈ ಬಾರಿ ಎನ್‌ಸಿ ಮೈತ್ರಿಕೂಟ ಜಮ್ಮು ಕಾಶ್ಮೀರದಲ್ಲಿ ಜಯಗಳಿಸಲಿದೆ ಎಂದು ಭವಿಷ್ಯ ನುಡಿದಿದ್ದವು.
ಒಟ್ಟು 90 ಕ್ಷೇತ್ರಗಳ ಪೈಕಿ ಎನ್‌ಸಿ 56, ಕಾಂಗ್ರೆಸ್ 38, ಸಿಪಿಎಂ 1 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಇಳಿಸಿದ್ದವು. ಬಿಜೆಪಿ 62 ಕ್ಷೇತ್ರಗಳಲ್ಲಿ ಪಿಡಿಪಿ 81 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿತ್ತು.
90 ಕ್ಷೇತ್ರಗಳ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯು ಮೂರು ಹಂತಗಳಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ನಡೆದಿತ್ತು 2014 ರಲ್ಲಿ ನಡೆದ ಚುನಾವಣೆಯಲ್ಲಿ ಪಿಡಿಪಿ 28, ಬಿಜೆಪಿ 25, ನ್ಯಾಷನಲ್ ಕಾನ್ಫರೆನ್ಸ್ 15 ಸ್ಥಾನಗಳನ್ನು ಗೆದ್ದುಕೊಂಡಿತ್ತು.