ನವದೆಹಲಿ/ಬೆಂಗಳೂರು: ರಾಜ್ಯಸಭೆ ಚುನಾವಣೆಗೆ (Rajya Sabha Elections) ರಾಷ್ಟ್ರೀಯ ಕಾಂಗ್ರೆಸ್ ಕೊನೆಗೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನ ಪ್ರಕಟ ಮಾಡಿದೆ.
ರಾಜ್ಯಸಭಾ ಚುನಾವಣೆ ಕರ್ನಾಟಕದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಮನ್ಸೂರ್ ಅಲಿಖಾನ್, ಪವನ್ ಖೇರಾ (Pawan Khera) ಮೂವರು ಸ್ಪರ್ಧಿಸುತ್ತಿದ್ದಾರೆ ಎಂದು ಎಐಸಿಸಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಮೂವರು ಅಭ್ಯರ್ಥಿಗಳು ಶುಕ್ರವಾರ (ಜೂ.5) ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಇದರೊಂದಿಗೆ ಮಧ್ಯಪ್ರದೇಶದಿಂದ ಮೀನಾಕ್ಷಿ ನಟರಾಜನ್, ರಾಜಸ್ಥಾನದಿಂದ ನೀರಜ್ ಡಾಂಗಿ, ತಮಿಳುನಾಡಿನಿಂದ ಪ್ರವೀಣ್ ಚಕ್ರವರ್ತಿ ಹಾಗೂ ಜಾರ್ಖಂಡ್‌ನಿಂದ ಪ್ರಣವ್ ಝಾಃ ಅವರು ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದಾರೆ. ಇದನ್ನೂ ಓದಿ: ಮುಂಗಾರು ಅಧಿವೇಶನದಲ್ಲಿ ಮತ್ತೆ ಡಿಲಿಮಿಟೇಷನ್ ಬಿಲ್ ಮಂಡನೆಗೆ ಕೇಂದ್ರ ಸರ್ಕಾರ ಸಿದ್ಧತೆ
3ನೇ ಸ್ಥಾನದ ಅಭ್ಯರ್ಥಿಗಾಗಿ ಭಾರೀ ಕಸರತ್ತು ನಡೆದಿತ್ತು. ಆಂಧ್ರದ ಮಾಜಿ ಸಿಎಂ ವೈ.ಎಸ್ ರಾಜಶೇಖರ ರೆಡ್ಡಿ ಪುತ್ರಿ ಹಾಗೂ ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ರೆಡ್ಡಿ ಹಾಗೂ ಪವನ್ ಖೇರಾ ಅವರ ಹೆಸರು ರೇಸ್‌ನಲ್ಲಿತ್ತು. ಆದ್ರೆ ಹೈಕಮಾಂಡ್ ಪವನ್ ಖೇರಾ ಅವರ ಹೆಸರನ್ನು ಅಂತಿಮಗೊಳಿಸಿದೆ.

ಶುಕ್ರವಾರ ಮಧ್ಯಾಹ್ನ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ ವೇಳೆ ರಾಹುಲ್ ಗಾಂಧಿ ಕೂಡ ಉಪಸ್ಥಿತರಿರಲಿದ್ದಾರೆ. ಈ ಮಧ್ಯೆ, ಎಂಎಲ್‌ಸಿ ಹಾಗೂ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಸದ್ದಿಲ್ಲದೆ ಸಹಿ ಸಂಗ್ರಹ ಮಾಡುತ್ತಿದೆ.
ರಾಜ್ಯದಿಂದ ಚುನಾಯಿತರಾಗುವ ಅಭ್ಯರ್ಥಿಗಳು ಸ್ಥಳೀಯರೇ ಆಗಿರಬೇಕು. ಯಾವುದೇ ಕಾರಣಕ್ಕೂ ಹೊರ ರಾಜ್ಯದವರಿಗೆ ಮಣೆ ಹಾಕುವುದು ಬೇಡ ಎಂಬುದು ಇಲ್ಲಿನ ನಾಯಕರ ಆಗ್ರಹವಾಗಿತ್ತು. ಆದರೆ, ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಪವನ್ ಖೇರಾ ಅವರನ್ನು ರಾಜ್ಯಸಭೆಗೆ ಚುನಾಯಿಸಿದೆ.
ನಾಮಪತ್ರ ಸಲ್ಲಿಕೆ ಮಾಡಲು ಜೂ.8 ಅಂತಿಮ ದಿನವಾಗಿದ್ದು, ಜೂ.9 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಜೂ.11ರಂದು ಕೊನೆಯ ದಿನವಾಗಿದೆ. ಇದನ್ನೂ ಓದಿ: ಬಿಜೆಪಿಗೆ ನಾಳೆ ಅಣ್ಣಾಮಲೈ ಗುಡ್‌ಬೈ – ಚೆನ್ನೈನಲ್ಲಿ ಸುದ್ದಿಗೋಷ್ಠಿ ಕರೆದ ʻಸಿಂಗಂʼ













