ʼನಾನೇಕೆ ಗಾಂಧಿಯನ್ನು ಕೊಂದೆʼ ಸಿನಿಮಾಗೆ ತಡೆ ನೀಡುವಂತೆ ಮಹಾ ಸರ್ಕಾರಕ್ಕೆ ಕಾಂಗ್ರೆಸ್‌ ಮನವಿ

Public TV
1 Min Read
why i killed gandhi1

ಮುಂಬೈ: ʼನಾನೇಕೆ ಗಾಂಧಿಯನ್ನು ಕೊಂದೆʼ ಸಿನಿಮಾ ಬಿಡುಗಡೆಯಾಗುವುದಕ್ಕೆ ತಡೆ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಕಾಂಗ್ರೆಸ್‌ ಮನವಿ ಮಾಡಿದೆ.

Amol Kolhe

ಇದೇ ಜನವರಿ 30 ರಂದು ಈ ಸಿನಿಮಾ ಬಿಡುಗಡೆಯಾಗಲಿದೆ. ಸಿನಿಮಾದಲ್ಲಿ ಎನ್‌ಸಿಪಿ ಸಂಸದ ಮತ್ತು ನಟ ಅಮೋಲ್‌ ಕೊಲ್ಹೆ ಅವರು ಮಹಾತ್ಮ ಗಾಂಧಿಯನ್ನು ಕೊಂದ ನಾಥೊರಾಮ್‌ ಗೋಡ್ಸೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮಹಾತ್ಮ ಗಾಂಧಿ ಅವರ ಪುಣ್ಯತಿಥಿ (ಜ.30)ಯಂದೇ ಸಿನಿಮಾ ಬಿಡುಗಡೆಯಾಗುತ್ತಿದೆ. ಇದಕ್ಕೆ ತಡೆ ನೀಡಬೇಕು ಎಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ಮನವಿ ಸಲ್ಲಿಸಿದೆ. ಇದನ್ನೂ ಓದಿ: ಬಿಜೆಪಿ ವಿರುದ್ಧ ಸಂಜಯ್ ರಾವತ್ ವಾಗ್ದಾಳಿ

ಮಹಾರಾಷ್ಟ್ರ ಕಾಂಗ್ರೆಸ್‌ ಮುಖ್ಯಸ್ಥ ನಾನಾ ಪಟೋಲೆ ಸಲ್ಲಿಸಿರುವ ಮನವಿ ಪತ್ರದಲ್ಲಿ, ಮಹಾತ್ಮ ಗಾಂಧಿ ಅವರ ಪುಣ್ಯತಿಥಿ ದಿನವಾದ ಜ.30 ರಂದು ಚಿತ್ರಮಂದಿರ ಹಾಗೂ ಓಟಿಟಿ ವೇದಿಕೆಗಳಲ್ಲಿ ʼನಾನೇಕೆ ಗಾಂಧಿಯನ್ನು ಕೊಂದೆʼ ಸಿನಿಮಾ ಬಿಡುಗಡೆ ಮಾಡಲಾಗುತ್ತಿದೆ. ಆದರೆ ಕೋಮು ಸೌಹಾರ್ದತೆ ದೃಷ್ಟಿಯಿಂದ ಗಾಂಧಿ ಅವರ ಪುಣ್ಯತಿಥಿ ದಿನವನ್ನು ರಾಷ್ಟ್ರೀಯ ಏಕತಾ ದಿನವಾಗಿ ಆಚರಿಸಲಾಗುತ್ತಿದೆ ಎಂದು ಉಲ್ಲೇಖಿಸಿದ್ದಾರೆ.

Mahatma Gandhi large

ಒಂದೆಡೆ ಅಹಿಂಸೆ, ಶಾಂತಿಗಾಗಿ ಗಾಂಧೀಜಿ ಅವರ ಪುಣ್ಯತಿಥಿ ಆಚರಿಸಿದರೆ, ಮತ್ತೊಂದೆಡೆ ʼನಾನೇಕೆ ಗಾಂಧಿಯನ್ನು ಕೊಂದೆʼ ಸಿನಿಮಾ ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ಜನಾಂಗೀಯ ಪ್ರವೃತ್ತಿಗಳಿಗೆ ಬಲ ಬಂದಂತಾಗುತ್ತದೆ. ಭಾರತೀಯ ಸಂಸ್ಕೃತಿ ಯಾವಾಗಲೂ ಅಮಾನವೀಯ ಕೃತ್ಯಗಳನ್ನು ವಿರೋಧಿಸುತ್ತದೆ. ಹೀಗಾಗಿ ಈ ಚಲನಚಿತ್ರವನ್ನು ರಾಜ್ಯದ ಚಿತ್ರಮಂದಿರಗಳು ಮತ್ತು ಓಟಿಟಿ ವೇದಿಕೆಗಳಲ್ಲಿ ಬಿಡುಗಡೆ ಮಾಡಬಾರದು ಎಂದು ಪಟೋಲೆ ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಸದಸ್ಯರಿದ್ದಾಗ ಶಿವಸೇನೆ ಹುಟ್ಟಿರಲಿಲ್ಲ: ದೇವೇಂದ್ರ ಫಡ್ನವಿಸ್

Share This Article