ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಮೀಸಲಾತಿ ತಪ್ಪಲು ಕಾಂಗ್ರೆಸ್ಸೇ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರೋಧ ವ್ಯಕ್ತಪಡಿಸಿದರು.
ಮಲ್ಲೇಶ್ವರಂ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರದ ಕಾಂಗ್ರೆಸ್ ಬೆಂಬಲಿತ ಸರಕಾರವು ಸರಿಯಾಗಿ ಸಮರ್ಥನೆ ಮಾಡಿ ಹಿಂದುಳಿದ ವರ್ಗದ ಹಿತಾಸಕ್ತಿಯನ್ನು ಎತ್ತಿ ಹಿಡಿಯದ ಕಾರಣ ಹೀಗಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸತ್ಯವನ್ನು ಮುಚ್ಚಿಡುವ ಕೆಲಸ ಮಾಡುತ್ತಿದ್ದು, ಇದು ಅವರ ವ್ಯಕ್ತಿತ್ವಕ್ಕೆ ಕಳಂಕ ತರುವಂತಿದೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ನಾಯಕರೆಲ್ಲ ಬೇಲ್ ಮೇಲೆ ಇದ್ದಾರೆ: ಸುನೀಲ್ ಕುಮಾರ್
Advertisement
Advertisement
ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಪರ ಇದೆ. ದೇಶದಲ್ಲಿ ಮೊದಲ ಬಾರಿಗೆ ಸಂವಿಧಾನಬದ್ಧವಾಗಿ ಹಿಂದುಳಿದ ವರ್ಗಗಳಿಗೆ ಆಯೋಗ ರಚಿಸಿದ ಬಿಜೆಪಿ ಸರ್ಕಾರ, ನರೇಂದ್ರ ಮೋದಿ ಅವರ ಸರ್ಕಾರ. ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಪಾಡಲು ನಾವು ಬದ್ಧರಿದ್ದೇವೆ ಎಂದು ತಿಳಿಸಿದರು.
Advertisement
Advertisement
ಮಹಾರಾಷ್ಟ್ರದ ನಿಮ್ಮದೇ ಸರ್ಕಾರ ಮಾಡಿದ ತಪ್ಪಿನಿಂದ ಹೀಗಾಗಿದೆ ಎಂದು ಸಿದ್ದರಾಮಯ್ಯ ಅವರು ನೆನಪು ಮಾಡಿಕೊಳ್ಳಬೇಕು. ನ್ಯಾಯಾಧೀಶರ ಪೀಠ ತಡೆಯಾಜ್ಞೆ ನೀಡಿದ್ದರಿಂದ ಬಿಬಿಎಂಪಿ ಚುನಾವಣೆ ಮಾಡಲು ಸಾಧ್ಯವಾಗಿಲ್ಲ ಎಂದು ಉತ್ತರಿಸಿದರು. ಇದನ್ನೂ ಓದಿ: ಕೃಷ್ಣಮೃಗ ಬೇಟೆಗಾರರಿಂದ 3 ಪೊಲೀಸರ ಹತ್ಯೆ – 1 ಕೋಟಿ ರೂ. ಪರಿಹಾರ ಫೋಷಿಸಿದ ಸಿಎಂ
ರಾಜ್ಯಸಭೆಗೆ ಸ್ಪರ್ಧಿಸುವವರ ವಿವರವನ್ನು ಸಂಸದೀಯ ಮಂಡಳಿ ಅಂತಿಮಗೊಳಿಸಲಿದೆ. ರಾಷ್ಟ್ರಗೀತೆ, ಸಂವಿಧಾನವನ್ನು ವಿವಾದದ ವಿಷಯ ಮಾಡಬಾರದು. ಅದನ್ನು ಗೌರವಿಸಬೇಕು ಎಂದು ತಿಳಿಸಿದರು.