ಯಾದಗಿರಿ: ಕಾಂಗ್ರೆಸ್ (Congress) ಅಭ್ಯರ್ಥಿ, ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ (Baburao Chinchansur) ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಕಲಬುರಗಿ ಆಕಾಶವಾಣಿ ಕೇಂದ್ರದ ಬಳಿ ನಡೆದಿದೆ.
ಯಾದಗಿರಿ (Yadagiri) ಜಿಲ್ಲೆಯ ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ ಚಿಂಚನಸೂರ್. ಇವರು ಯಾದಗಿರಿಯಿಂದ ಕಲಬುರಗಿಗೆ ಹೋಗುವಾಗ ಅಪಘಾತ ಸಂಭವಿಸಿದೆ. ರಾತ್ರಿ 12:30 ರ ಸುಮಾರಿಗೆ ಈ ಘಟನೆ ನಡೆದಿದೆ. ಇದನ್ನೂ ಓದಿ: ಸವದಿ ಪಕ್ಷ ಬಿಟ್ಟು ಹೋಗಿದ್ದು ಪೀಡೆ ತೊಲಗಿದಂತಾಗಿದೆ: ರಮೇಶ್ ಜಾರಕಿಹೊಳಿ
Advertisement
Advertisement
ರಸ್ತೆಯ ಮಧ್ಯೆ ಇರುವ ಗುಂಡಿಯಲ್ಲಿ ಕಾರು ಹಾದುಹೋದ ಕಾರಣ ನಿಯಂತ್ರಣ ತಪ್ಪಿ ಕಾರು ಬಿದ್ದಿದೆ. ಚಾಲಕ ನಿದ್ರೆಯ ಮಂಪರಿನಲ್ಲಿ ವಾಹನ ಚಲಾಯಿಸಿದ್ದಕ್ಕೆ ಹೀಗೆ ಆಗಿದೆ ಎನ್ನಲಾಗಿದೆ. ಕಾರು ಬಿದ್ದ ರಭಸಕ್ಕೆ ಚಿಂಚನಸೂರ್ ತಲೆ ಹಾಗೂ ಕಾಲಿಗೆ ಗಾಯಗಳಾಗಿವೆ.
Advertisement
Advertisement
ಸ್ಥಳೀಯರ ಸಹಕಾರದಿಂದ ಚಿಂಚನಸೂರ್ ಅವರನ್ನು ಕಲಬುರಗಿ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಮತ್ತು ಗನ್‌ಮ್ಯಾನ್‌ಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕಾರು-ಬಸ್ ನಡುವೆ ಡಿಕ್ಕಿ ; ಐವರ ಸಾವು
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗುರುಮಠಕಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಾಬುರಾವ್ ಚಿಂಚನಸೂರ್ ಕಣಕ್ಕಿಳಿದಿದ್ದಾರೆ. ಬಿಜೆಪಿಯಿಂದ ಯಾದಗಿರಿ ಚುನಾವಣಾ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳಾ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ.