– ಪಿಒಕೆ & ಅಕ್ಸಾಯ್ ಚಿನ್ ಭಾರತದ ನಕಾಶೆಯಲ್ಲಿ ಕಣ್ಮರೆ
ಬೆಳಗಾವಿ: ಇಲ್ಲಿ ಆಯೋಜಿಸಿರುವ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವದ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಸ್ವಾಗತ ಕೋರುವ ಕಟೌಟ್, ಬ್ಯಾನರ್‌ಗಳಲ್ಲಿ ಕಾಂಗ್ರೆಸ್ ಎಡವಟ್ಟು ಮಾಡಿಕೊಂಡಿದೆ. ಬ್ಯಾನರ್‌ಗಳಲ್ಲಿ ತಪ್ಪಾದ ಭಾರತದ ನಕಾಶೆ ಮುದ್ರಿಸಿ ಟೀಕೆಗೆ ಗುರಿಯಾಗಿದೆ.
ಅಧಿಕೃತವಾದದ್ದನ್ನು ಬಿಟ್ಟು ತಪ್ಪಾದ ಭಾರತದ ನಕಾಶೆ ಅಳವಡಿಸಿ ಕಾಂಗ್ರೆಸ್ ವಿವಾದಕ್ಕೆ ಗುರಿಯಾಗಿದೆ. ಜಮ್ಮು-ಕಾಶ್ಮೀರದ ಮೇಲ್ಭಾಗದ ಪ್ರದೇಶ ಮೊಟಕುಗೊಂಡ ನಕಾಶೆ ಮುದ್ರಿಸಿರುವುದು ಬ್ಯಾನರ್ ಮತ್ತು ಕಟೌಟ್‌ನಲ್ಲಿ ಕಂಡುಬಂದಿದೆ. ಪಿಒಕೆ ಮತ್ತು ಅಕ್ಸಾಯ್ ಚಿನ್ ಭಾರತದ ನಕಾಶೆಯಲ್ಲಿ ಕಣ್ಮರೆಯಾಗಿದೆ. ಇದನ್ನೂ ಓದಿ: ಎರಡು ದಿನ ಗಾಂಧಿ ಭಾರತ್ ಕಾರ್ಯಕ್ರಮ; ಬೆಳಗಾವಿಗೆ ಖರ್ಗೆ, ರಾಹುಲ್ ಗಾಂಧಿ ಆಗಮನ
ಸ್ವಾತಂತ್ರ್ಯಕ್ಕಾಗಿ ಅಸ್ತಿತ್ವಕಂಡು ಕೊಂಡಿದ್ದ ಅಂದಿನ ಕಾಂಗ್ರೆಸ್ ಅನ್ನು ರಾಜಕೀಯ ಅಧಿಕಾರಕ್ಕಾಗಿ ಅಪೋಶನ ಮಾಡಿಕೊಂಡ ಕುಟುಂಬದ ಮುಷ್ಟಿಯಲ್ಲಿರುವ ಇಂದಿನ ಕಾಂಗ್ರೆಸ್, ಇಂದು ನಡೆಸುತ್ತಿರುವ ಬೆಳಗಾವಿ ಸಮಾವೇಶದ ಶತಮಾನದ ನೆನಪು ಕೇವಲ ರಾಜಕೀಯ ಹಿತಾಸಕ್ತಿಗಾಗಿ ಎಂಬುದು ದೇಶದ ಜನತೆಗೆ ತಿಳಿದಿದೆ.
ಭಾರತದ ಕಿರೀಟ ಕಾಶ್ಮೀರಕ್ಕೆ ಕತ್ತರಿ ಪ್ರಯೋಗಿಸಿ… pic.twitter.com/0mHNCNNHqP
— Vijayendra Yediyurappa (@BYVijayendra) December 26, 2024
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಯಿತು. ಪಾಕ್, ಚೀನಾ ವಿಭಜಿತ ನಕಾಶೆ ಹಾಕಿ ಅಪಮಾನ ಎಂದು ಸೋಶಿಯಲ್ ಮೀಡಿಯಾದಲ್ಲಿ ಟೀಕಾತ್ಮಕ ಪೋಸ್ಟ್‌ಗಳು ಹರಿದಾಡುತ್ತಿವೆ.
ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ರಾತ್ರೋರಾತ್ರಿ ಭಾರತದ ಬ್ಯಾನರ್ ಮೇಲೆ ಮತ್ತೊಂದು ಬ್ಯಾನರ್ ಕಟ್ಟಿ ಎಡವಟ್ಟು ಮರೆಮಾಚಲು ಯತ್ನಿಸಲಾಗಿತ್ತು. ಕಾಂಗ್ರೆಸ್ ಪ್ರಮಾದಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಬಳಿಕ, ತಪ್ಪಾದ ಭಾರತದ ನಕಾಶೆ ಇರುವ ಬ್ಯಾನರ್‌ಗಳನ್ನು ತೆರವುಗೊಳಿಸಲಾಯಿತು. ಇದನ್ನೂ ಓದಿ: ಕಟೌಟ್‌ಗಳಲ್ಲಿ ಗಾಂಧಿ ಫೋಟೋನೇ ನೋಡಲಿಲ್ಲ, ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ: ಹೆಚ್‌ಡಿಕೆ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ
ಸ್ವಾತಂತ್ರ‍್ಯಕ್ಕಾಗಿ ಅಸ್ತಿತ್ವ ಕಂಡುಕೊಂಡಿದ್ದ ಅಂದಿನ ಕಾಂಗ್ರೆಸ್ ಅನ್ನು ರಾಜಕೀಯ ಅಧಿಕಾರಕ್ಕಾಗಿ ಅಪೋಶನ ಮಾಡಿಕೊಂಡ ಕುಟುಂಬದ ಮುಷ್ಟಿಯಲ್ಲಿರುವ ಇಂದಿನ ಕಾಂಗ್ರೆಸ್, ಇಂದು ನಡೆಸುತ್ತಿರುವ ಬೆಳಗಾವಿ ಸಮಾವೇಶದ ಶತಮಾನದ ನೆನಪು ಕೇವಲ ರಾಜಕೀಯ ಹಿತಾಸಕ್ತಿಗಾಗಿ ಎಂಬುದು ದೇಶದ ಜನತೆಗೆ ತಿಳಿದಿದೆ.
ಭಾರತದ ಕಿರೀಟ ಕಾಶ್ಮೀರಕ್ಕೆ ಕತ್ತರಿ ಪ್ರಯೋಗಿಸಿ ಮಹಾತ್ಮನನ್ನು ಸ್ಮರಿಸಲು ಹೊರಟಿರುವುದು ಮಹಾತ್ಮನ ಆತ್ಮಕ್ಕೆ ಇರಿದಂತೆ ಅಲ್ಲವೇ? ಅಖಂಡ ಭಾರತದ ಅಸ್ತಿತ್ವ ಹಾಗೂ ರಾಷ್ಟ್ರ ವಿಭಜನೆಯನ್ನು ತಡೆಯಲು ಕಡೇ ಕ್ಷಣದವರೆಗೂ ಪ್ರಯತ್ನಿಸಿದ ಗಾಂಧಿಯವರನ್ನು ಅಪಮಾನಿಸಲು ಹೊರಟಿರುವ ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನದ ನೆನಪಿನ ಕಾರ್ಯಕ್ರಮ, ದೇಶಪ್ರೇಮವನ್ನು ಮೆರೆಯಲೋ, ಅಥವಾ ರಾಷ್ಟ್ರವಿದ್ರೋಹಿ ಶಕ್ತಿಗಳನ್ನು ಓಲೈಸಲೋ? ಅಥವಾ ನಿಮ್ಮ ಮಿತ್ರರಾದ ಕಾಶ್ಮೀರಿ ಪ್ರತ್ಯೇಕತಾವಾದಿಗಳ ಓಲೈಕೆಗೋ ಎನ್ನುವುದನ್ನು ಕಾಂಗ್ರೆಸ್ಸಿಗರು ಸ್ಪಷ್ಟಪಡಿಸಬೇಕು. ಇದನ್ನೂ ಓದಿ: ನಕಲಿ ಕಾಂಗ್ರೆಸ್ ನೀತಿ ವಿರುದ್ಧ ನಾಳೆ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಧರಣಿ: ಬಿ.ವೈ.ವಿಜಯೇಂದ್ರ
ಭಾರತದ ಭೂಪಟಕ್ಕೆ ಅಪಚಾರವೆಸಗಿ ಕಾಶ್ಮೀರವಿಲ್ಲದ ಭಾರತದ ಭೂಪಟವನ್ನು ಪ್ರದರ್ಶಿಸುವ ಮೂಲಕ ರಾಷ್ಟ್ರದ್ರೋಹ, ಗಾಂಧಿದ್ರೋಹ ಎರಡನ್ನು ಎಸೆಗಿರುವ ಕಾಂಗ್ರೆಸಿಗರು ಈ ಕೂಡಲೇ ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದು ಎಕ್ಸ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಪೋಸ್ಟ್ ಹಾಕಿದ್ದಾರೆ.