Bengaluru City
#CONgressFightsCONgress – ಕರ್ನಾಟಕ ಕಾಂಗ್ರೆಸ್ಸನ್ನು ಕಾಲೆಳೆದ ಬಿಜೆಪಿ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಒಳಜಗಳನ್ನು ಬಿಜೆಪಿ ಪ್ರಸ್ತಾಪಿಸಿ ಕಾಲೆಳೆದಿದೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವಿನ ಹೋರಾಟ ತಾರಕಕ್ಕೇರಿದೆ. ಪ್ರಧಾನಿ ಮೋದಿಯವರನ್ನು ಎದುರಿಟ್ಟುಕೊಂಡು ಗಡ್ಡ ಬಿಟ್ಟಿರುವ ಕೆಪಿಸಿಸಿ ಡಿ.ಕೆ.ಶಿವಕುಮಾರ್ ಮೇಲೆ ಸಿದ್ದರಾಮಯ್ಯ ಪರೋಕ್ಷ ದಾಳಿ ನಡೆಸಿದ್ದಾರೆ ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ. ಇದನ್ನೂ ಓದಿ: ಡಿಕೆ ಶಿವಕುಮಾರ್, ಕುಮಾರಸ್ವಾಮಿ ಇನ್ನೂ ಸಮ್ಮಿಶ್ರ ಸರ್ಕಾರದಲ್ಲೇ ಇದ್ದಾರಾ – ಸಿದ್ದರಾಮಯ್ಯ ಕಿಡಿ
ರಾಜ್ಯ ಕಾಂಗ್ರೆಸ್ನ ಪರಿಸ್ಥಿತಿ ಈಗ ಎತ್ತು ಏರಿಗೆ ಕೋಣ ನೀರಿಗೆ ಎಂಬಂತಾಗಿದೆ ಎಂದು ಬಿಜೆಪಿ ಕಾಂಗ್ರೆಸ್ ಪಕ್ಷವನ್ನು ಕಾಲೆಳೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದದ ಚರ್ಚೆಗಳು ನಡೆಯುತ್ತಿವೆ. ಇದನ್ನೂ ಓದಿ: ಪಕ್ಷ ಬಲಪಡಿಸುವ ಕೆಲಸ ಮಾಡ್ತಿಲ್ಲ: ಸಿದ್ದರಾಮಯ್ಯ ವಿರುದ್ಧ ತನ್ವೀರ್ ಸೇಠ್ ಆಕ್ರೋಶ
