ಚಿಕ್ಕಮಗಳೂರು: ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ಕ್ಷೇತ್ರದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಪರಸ್ಪರ ವಾಗ್ವಾದ ನಡೆಸಿ ಹೈಡ್ರಾಮ ನಡೆಸಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ.
ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಇಂದು ಶಂಕು ಸ್ಥಾಪನೆ ನಡೆಸಲು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ಶಾಸಕ ಸುರೇಶ್ ಆಗಮಿಸಿದ್ದರು. ಈ ವೇಳೆ ಸಂಸದರು ಹಾಗೂ ಶಾಸಕರ ಎದುರೇ ಎರಡು ಪಕ್ಷದ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.
Advertisement
Advertisement
ಮಾಜಿ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಶಾಸಕ ಸುರೇಶ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಈ ವೇಳೆ ಮಧ್ಯ ಪ್ರವೇಶ ಮಾಡಿದ ಪೊಲೀಸರು ಪ್ರತಿಭಟನೆಗೆ ಮುಂದಾದ ಶ್ರೀನಿವಾಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಬಂಧನ ಮಾಡಿ ಕರೆದ್ಯೊಯ್ದರು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಇತ್ತ ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರ ಹರಸಾಹಸ ಪಟ್ಟರು. ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Advertisement
ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಮಾಜಿ ಶಾಸಕ ಶ್ರೀನಿವಾಸ್ ಅವರು, ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಗೆ ಬರುವ ಸುಮಾರು 59 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಇದ್ದ ವೇಳೆಯೇ ಈ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. ಆದರೆ ಇಂದು ಬಿಜೆಪಿ ಶಾಸಕರು ಮತ್ತೆ ಶಂಕುಸ್ಥಾಪನೆ ಮಾಡಲು ಮುಂದಾಗಿದ್ದಾರೆ. ಯೋಜನೆ ಆರಂಭವಾಗಿಯೇ 6 ತಿಂಗಳು ಆಗಿದೆ ಎಂದು ಆರೋಪ ಮಾಡಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv