ಲಕ್ನೋ: ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ನಿರ್ಮಿಸಿರುವ ರೈಲ್ವೇ, ವಿಮಾನ ನಿಲ್ದಾಣ, ರಸ್ತೆಗಳನ್ನು ಬಿಜೆಪಿ ಸರ್ಕಾರ ಮಾರಾಟ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಉತ್ತರ ಪ್ರದೇಶದ ಗೋರಖ್‍ಪರ್ ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದಲ್ಲಿ ರೈಲ್ವೇ, ವಿಮಾನ ನಿಲ್ದಾಣ ಮತ್ತು ರಸ್ತೆಗಳನ್ನು ನಿರ್ಮಿಸಿ ಕೊಟ್ಟಿತ್ತು. ಆದರೆ ಬಿಜೆಪಿಯವರು ಕಾಂಗ್ರೆಸ್ ಸರ್ಕಾರ 70 ವರ್ಷಗಳಿಂದ ಏನು ಕೊಟ್ಟಿದೆ ಎಂದು ಪ್ರಶ್ನಿಸುತ್ತಾರೆ. ಅವರಿಗೆ ಪ್ರಶ್ನಿಸುವ ಅಧಿಕಾರವಿಲ್ಲ ಅವರು ನಾವು 70 ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಕೇವಲ 7 ವರ್ಷಗಳಲ್ಲಿ ಹಾಳು ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಇಂದಿರಾ ಗಾಂಧಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲಾ ಜಾತಿಗಳು ಮತ್ತು ವರ್ಗಗಳ ಜನರನ್ನು ಶೋಷಣೆ ಮಾಡುತ್ತಿದೆ. ದಲಿತರು, ನೇಕಾರರು, ಅಲ್ಪಸಂಖ್ಯಾತರು, ಒಬಿಸಿಗಳು ಮತ್ತು ಬ್ರಾಹ್ಮಣರು ಶೋಷಣೆಗೆ ಒಳಗಾಗಿದ್ದಾರೆ. ಯೋಗಿ ಗುರು ಗೋರಖನಾಥರ ಬೋಧನೆಗೆ ವಿರುದ್ಧವಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ. ಜನರನ್ನು ರಕ್ಷಿಸಬೇಕಾಗಿದ್ದ ಸರ್ಕಾರವೇ ಜನರಿಗೆ ಹಲ್ಲೆ ಮಾಡಿ ಶೋಷಣೆಗೆ ಒಳಪಡಿಸಿದೆ. ರಾಜ್ಯದಲ್ಲಿ ನಿರುದ್ಯೋಗ ಪ್ರಮುಖ ಸಮಸ್ಯೆಯಾಗಿದೆ. ಉತ್ತರಪ್ರದೇಶದಲ್ಲಿ 5 ಕೋಟಿ ನಿರುದ್ಯೋಗಿ ಯುವಕರಿದ್ದಾರೆ. ನಿರುದ್ಯೋಗದಿಂದ ಪ್ರತಿದಿನ ಮೂವರು ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
कांग्रेस प्रतिज्ञा रैली, गोरखपुर
Live from Congress Pratigya Rally, Gorakhpur.
https://t.co/V57GsMYRez
— Priyanka Gandhi Vadra (@priyankagandhi) October 31, 2021
ಕಾಂಗ್ರೆಸ್ ಪಕ್ಷ, ಬಿಜೆಪಿಯೊಂದಿಗೆ ಯಾವತ್ತು ಸೇರುವುದಿಲ್ಲ. ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜ ಪಕ್ಷಗಳ(SP and BSP) ಆರೋಪ ಸುಳ್ಳು ಎಂದು ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಪಕ್ಷದ ಬಗ್ಗೆ ಕೇಳಿಬರುತ್ತಿದ್ದ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಸಕ್ಕರೆ ನಾಡಿಗೆ ನೂತನ ಎಸ್‍ಪಿ ಆಗಮನ