ಭೂಪಾಲ್: ಬಾಲಿವುಡ್ ನಟ ಅಮಿತಾಭ್ ಬಚ್ಚನ್, ನಟ ಅಕ್ಷಯ್ ಕುಮಾರ್ ಅವರ ಪ್ರತಿಕೃತಿ ದಹಿಸಿ ಮಧ್ಯ ಪ್ರದೇಶ ಕಾಂಗ್ರೆಸ್ ಇಂದು ಪ್ರತಿಭಟನೆ ಮಾಡಿದೆ.
ಯುಪಿಎ ಅಧಿಕಾರದಲ್ಲಿದ್ದಾಗ ಬೆಲೆ ಏರಿಕೆ ಹಾಗೂ ಹಣದುಬ್ಬರ ವಿರುದ್ದ ಟ್ವೀಟ್ ಮಾಡಿದ್ದ ಈ ನಟರು, ಇದೀಗ ಪೆಟ್ರೋಲ್, ಡೀಸೆಲ್ ಅಡುಗೆ ಅನಿಲ ಸತತವಾಗಿ ಏರುತ್ತಿದ್ದರೂ ಮೌನವಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಪ್ರಧಾನಿ ಮೋದಿ ತವರಿಗೇ ಲಗ್ಗೆಯಿಟ್ಟ XE ಕೊರೊನಾ ರೂಪಾಂತರಿ
ಅಮಿತಾಭ್ ಬಚ್ಚನ್ ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿದ್ದು, ಕಾಂಗ್ರೆಸ್ ಹತಾಶೆಯಿಂದ ಈ ರೀತಿ ಪ್ರತಿಭಟನೆ ನಡೆಸುತ್ತಿದೆ ಎಂದು ಬಿಜೆಪಿ ಮುಖಂಡ ವಿಶ್ವಾಸ್ ಸಾರಂಗ್ ಟೀಕಿಸಿದ್ದಾರೆ. ಇದನ್ನೂ ಓದಿ: ಯುಪಿ ಸಿಎಂ ಕಚೇರಿಯ ಟ್ವಿಟ್ಟರ್ ಖಾತೆ ಹ್ಯಾಕ್
2021ರಲ್ಲಿ ಅಡುಗೆ ಅನಿಲದ ಬೆಲೆ ರೂ. 300 ರಿಂದ 4000 ಹಾಗೂ ಲೀಟರ್ ಪೆಟ್ರೋಲ್ ಬೆಲೆ 60 ರೂ. ಇತ್ತು. ಅಂತಹ ಸಂದರ್ಭದಲ್ಲಿ ಕೇಂದ್ರದಲ್ಲಿದ್ದ ಯುಪಿಎ ಸರ್ಕಾರವನ್ನು ಟೀಕಿಸಿದ್ದ ಅಮಿತಾಭ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್, ವಾಹನಗಳನ್ನು ಖರೀದಿಸಬಹುದು. ಆದರೆ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಸಲು ಸಾಲದ ಅಗತ್ಯವಿದೆ ಎಂದು ಟ್ವೀಟ್ ಮಾಡಿದ್ದರು. ಇದನ್ನು ಓದಿ:ಏ.18ಕ್ಕೆ ದುನಿಯಾ ವಿಜಯ್ ನಿರ್ದೇಶನದ ‘ಭೀಮ’ನಿಗೆ ಮುಹೂರ್ತ
ಅಡುಗೆ ಅನಿಲ ಬೆಲೆ 1 ಸಾವಿರ ರೂಪಾಯಿಯಷ್ಟು ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 100 ರಿಂದ 120 ರೂ. ಆಗಿದೆ. ಆದಾಗ್ಯೂ, ಇವರಿಗೆ ಸಾಮಾನ್ಯ ಜನರ ಪರ ಕಾಳಜಿ ಇಲ್ಲ ಎಂದು ಕಾಂಗ್ರೆಸ್ ಎಂಎಲ್ ಸಿ ಪಿ. ಸಿ. ಶರ್ಮಾ ಆರೋಪಿಸಿದರು.