ನವದೆಹಲಿ: ದಿನದಿಂದ ದಿನಕ್ಕೆ ತೈಲ ಬೆಲೆಗಳು ಗಗನಕ್ಕೇರುತ್ತಿದ್ದರೂ, ಕೇಂದ್ರ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ, ಹೀಗಾಗಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಇದೇ ಸೆಪ್ಟೆಂಬರ್ 10 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಭಾರತ್ ಬಂದ್ ಗೆ ಕರೆ ನೀಡಿದೆ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲಗಳ ಬೆಲೆಗಳಿಂದಾಗಿ ಜನಸಾಮಾನ್ಯ ಸುಟ್ಟು ಹೋಗುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ಇದರ ಬಿಸಿ ಮುಟ್ಟಿಸಲು ಇದೇ ಸೆಪ್ಟೆಂಬರ್ ದೇಶವ್ಯಾಪಿ ಪ್ರತಿಭಟನೆ ನಡೆಸಿ ಭಾರತ್ ಬಂದ್ ನಡೆಸಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?
Advertisement
A protest will be called on September 10 against this fuel loot by the Central Govt: Randeep Surjewala,Congress pic.twitter.com/6pyHpuwQ2q
— ANI (@ANI) September 6, 2018
Advertisement
ಕೇಂದ್ರ ಸರ್ಕಾರ ತೈಲ ದರ ಏರಿಕೆ ಮಾಡುವ ಮೂಲಕ 11 ಲಕ್ಷ ಕೋಟಿ ರೂಪಾಯಿಯನ್ನು ಕೊಳ್ಳೆಹೊಡೆದಿದೆ. ಶೀಘ್ರವೇ ಕೇಂದ್ರ ತೆರಿಗೆ ಹಾಗೂ ಅಬಕಾರಿ ಸುಂಕವನ್ನು ರಾಜ್ಯಗಳಲ್ಲಿ ಕಡಿತಗೊಳಿಸಬೇಕು. ಹಾಗೆಯೇ ಪೆಟ್ರೋಲ್ ಹಾಗೂ ಡೀಸೆಲ್ ಗಳನ್ನು ಸಹ ಜಿಎಸ್‍ಟಿ ವ್ಯಾಪ್ತಿಗೆ ಒಳಪಡಿಸಬೇಕೆಂದು ಆಗ್ರಹಿಸುತ್ತೇವೆ. ಇದರಿಂದಾಗಿ ಜನಸಾಮಾನ್ಯರ ಮೇಲಿನ ಭಾರ ಸ್ವಲ್ಪವಾದರೂ ಕಡಿಮೆಯಾಗುತ್ತದೆ. ಹೀಗಾಗಿ ಭಾರತ್ ಬಂದ್‍ಗೆ ಎಲ್ಲಾ ವಿರೋಧ ಪಕ್ಷದ ನಾಯಕರು ಸಹ ಬೆಂಬಲ ನೀಡಬೇಕು. ಅಲ್ಲದೇ ಎಲ್ಲಾ ಎನ್‍ಜಿಓ ಹಾಗೂ ಜನರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕೋರಿಕೊಂಡರು.
Advertisement
ಈ ವೇಳೆ ಕಾಂಗ್ರೆಸ್ಸಿನ ಹಿರಿಯ ಮುಖಂಡರಾದ ಆಶೋಕ್ ಗೆಹ್ಲೋಟ್ ಮಾತನಾಡಿ, ನಾವು ಭಾರತ್ ಬಂದ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನು ಎಚ್ಚರಿಸಬೇಕಾಗಿದೆ. ಇಂಧನ ಬೆಲೆಗಳು ಗಗನಕ್ಕೇರಿದ್ದರೂ ಅವರನ್ನು ಸುಮ್ಮನೆ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಭಾರತದಲ್ಲಿ ಪೆಟ್ರೋಲ್ ದರ 82 ರೂ. – ಪಾಕಿಸ್ತಾನ, ಅಮೆರಿಕ, ಶ್ರೀಲಂಕಾದಲ್ಲಿ ಎಷ್ಟು?
Advertisement
LIVE: Special Press Briefing https://t.co/M6zXmUk9zC
— Randeep Singh Surjewala (@rssurjewala) September 6, 2018
ಭಾರತ್ ಬಂದ್ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿರು ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಪೆಟ್ರೋಲ್ ಹಾಗೂ ಡಿಸೇಲ್ ದರಗಳು ಗಗನಕ್ಕೆ ಏರಿಕೆಯಾಗುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಹೃದಯ ಇಲ್ಲದಂತೆ, ಕರುಣೆ ಇಲ್ಲದಂತೆ ವರ್ತಿಸುತ್ತಿದ್ದಾರೆ. ಹೀಗಾಗಿ ಪೆಟ್ರೋಲ್, ಡೀಸೆಲ್ ಬೆರೆ ಏರಿಕೆ ಖಂಡಿಸಿ ಇದೇ ಸೆಪ್ಟೆಂಬರ್ 10ಕ್ಕೆ ಕಾಂಗ್ರೆಸ್ ವತಿಯಿಂದ ರಾಷ್ಟ್ರವ್ಯಾಪಿ ಭಾರತ್ ಬಂದ್ ನಡೆಸಲು ತೀರ್ಮಾಸಿದ್ದೇವೆ ಎಂದು ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv