ತುಮಕೂರು: ಮಾರ್ಚ್ 9 ರಂದು ಕರ್ನಾಟಕ ಬಂದ್‌ಗೆ ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕರೆ ಕೊಟ್ಟಿದ್ದಾರೆ.
ತುಮಕೂರಿನ ಮಾತನಾಡಿದ ಡಿಕೆಶಿ, ಬಿಜೆಪಿ (BJP) ಭ್ರಷ್ಟಾಚಾರ (Corruption) ಖಂಡಿಸಿ ಮಾರ್ಚ್ 9 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 11 ಗಂಟೆವರೆಗೆ ಎಲ್ಲಾ ವ್ಯಾಪರಿಗಳು ಬಂದ್‌ಗೆ ಬೆಂಬಲ ನೀಡುವಂತೆ ಕೋರಿದ್ದಾರೆ. ಇದನ್ನೂ ಓದಿ: ಬೀದಿ ಹೆಣ್ಣುನಾಯಿಯ ಮೇಲೆ ಅತ್ಯಾಚಾರ – ವಿಕೃತಕಾಮಿ ವಿರುದ್ಧ ಕೇಸ್
Advertisement
Advertisement
ಬಂದ್ ವೇಳೆ ಯಾವುದೇ ಶಾಲೆ, ಕಾಲೇಜು ಆಸ್ಪತ್ರೆ ಸಾರ್ವಜನಿಕರಿಗೆ ತೊಂದರೆಯಾಗಬಾರದು, ಕಾನೂನು (Law) ಕೈಗೆತ್ತಿಕೊಳ್ಳುವ ಕೆಲಸ ಯಾರೂ ಮಾಡಬಾರದು. ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತಮಾಡಲು ನಿಮ್ಮ ಸಹಕಾರ ಬೇಕು. ಅದಕ್ಕಾಗಿ ಎಲ್ಲ ಸಂಘ, ಸಂಸ್ಥೆಗಳು ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕರಾವಳಿ ಗರಿಷ್ಠ ತಾಪಮಾನ ಇಳಿಕೆ ಸಾಧ್ಯತೆ – ಹೀಟ್ ವೇವ್ ಅಲರ್ಟ್ ವಾಪಸ್
Advertisement
Advertisement
ಮುಂದುವರಿದು, ರಾಷ್ಟ್ರದ ನಾಯಕರ ಬಳಿ ಅನೇಕ ವಿಚಾರಗಳನ್ನ ಚರ್ಚೆ ಮಾಡಿದ್ದೇವೆ. ಕಳೆದ ಮೂರುವರೆ ವರ್ಷದಿಂದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಜನರ ಗಮನ ಸೆಳೆದಿದ್ದೇವೆ. ಬಿಜೆಪಿ ಇಡೀ ರಾಜ್ಯಕ್ಕೆ ಅಗೌರವ ತರುವ ಕೆಲಸ ಬಿಜೆಪಿ ಮಾಡಿದೆ. ಸಿಎಂ ಭ್ರಷ್ಟಾಚಾರಕ್ಕೆ ಆಧಾರ ಕೊಡಿ ಅಂತಾ ಕೇಳಿದ್ರು, ಗುತ್ತಿಗೆದಾರ ಸಂಘದ ಅಧ್ಯಕ್ಷರು ನೇರವಾಗಿ ಮೋದಿ ಅವರಿಗೆ ಪತ್ರ ಬರೆದಿದ್ದರು. ಈವರೆಗೂ ಯಾವುದೇ ಉತ್ತರ ಕೊಡದೇ ಮೋದಿ ನಾನು ತಿನ್ನೋದಿಲ್ಲ, ತಿನ್ನೋರಿಗೂ ಬಿಡಲ್ಲ’ ಎಂದು ಹೇಳಿದ್ದಾರೆ.
ಎಲ್ಲ ಕಚೇರಿಗಳಲ್ಲಿ ಆಗುತ್ತಿರುವ ಭ್ರಷ್ಟಾಚಾರದ ಬಗ್ಗೆ ಜನರ ಗಮನ ಸೆಳೆದಿದ್ದೇವೆ. ಭ್ರಷ್ಟಾಚಾರದಿಂದ ಸಾವಿರಾರು ಜನ ನೊಂದಿದ್ದಾರೆ. ಸಿಎಂ ಕೇಳಿದ ಸಾಕ್ಷಿಗೆ ಲೋಕಾಯುಕ್ತ ಅಧಿಕಾರಿಗಳು ಕೊಟ್ಟಿದ್ದಾರೆ. ಸರ್ಕಾರಿ ಕಚೇರಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಾರೆ. ಎಲ್ಲಾ ಲೊಕಾಯುಕ್ತ ಅಧಿಕಾರಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಇದರ ನೈತಿಕ ಹೊಣೆಹೊತ್ತು ಸಿಎಂ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.