Tuesday, 21st May 2019

Recent News

ಮೈತ್ರಿ ಸರ್ಕಾರದ ರಚನೆ ಸುಳಿವು ಬಿಚ್ಚಿಟ್ಟ ಕಾಂಗ್ರೆಸ್ ನಾಯಕ ಚಿದಂಬರಂ

ನವದೆಹಲಿ: 2019ರ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರ ರಚನೆಯ ತಂತ್ರ ಹಾಗೂ ಭರವಸೆಯನ್ನು ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ತೆರೆದಿಟ್ಟಿದ್ದಾರೆ.

ದೇಶದ 12 ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಬಲವಾಗಿದೆ. ಸದ್ಯ 48 ಜನ ಸಂಸದರನ್ನು ನಾವು ಹೊಂದಿದ್ದೇವೆ. ಈ ಸಂಖ್ಯೆ 2019ರ ಲೋಕಸಭೆ ಚುನಾವಣೆಯಲ್ಲಿ ಮೂರುಪಟ್ಟು ಹೆಚ್ಚಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿಣಿ (ಸಿಡಬ್ಲ್ಯುಸಿ)ಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 150 ಸೀಟ್ ಪಡೆಯುವ ಮೂಲಕ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಹೀಗಾಗಿ ವಿವಿಧ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ನಾಯಕರ ಮನವೊಲಿಸಿ ಮೈತ್ರಿ ಸರ್ಕಾರ ರಚಿಸುವಲ್ಲಿ ಶ್ರಮಿಸಬೇಕು ಎಂದು ತಿಳಿಸಿದರು.

ಈಗಾಗಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚಿಸಿಕೊಂಡು ಆಡಳಿತ ನಡೆಸುತ್ತಿವೆ. ಲೋಕಸಭೆ ಚುನಾವಣೆಗೂ ಎರಡೂ ಪಕ್ಷಗಳ ನಡುವೆ ಮೈತ್ರಿ ಆಗಲಿದೆ ಎಂದು ಹೇಳಲಾಗಿದೆ. ಆದ್ರೆ ಯಾವ ಕ್ಷೇತ್ರಗಳ ಲೆಕ್ಕಾಚಾರದ ಬಗ್ಗೆ ಚರ್ಚೆಗಳು ಎರಡೂ ಪಕ್ಷದಲ್ಲಿ ನಡೆಯುತ್ತಿವೆ.

Leave a Reply

Your email address will not be published. Required fields are marked *