ಕಾರವಾರ: ಪಕ್ಷೇತರ ಶಾಸಕ, ಕಾರವಾರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸತೀಶ್ ಸೈಲ್‍ಗೆ ಬಂಧನದ ಭೀತಿ ಎದುರಾಗಿದೆ.
ಅಕ್ರಮ ಅದಿರು ಸಾಗಾಣಿಕೆ ಪ್ರಕಣರದ ವಿಚಾರಣೆ ನಡೆಸುತ್ತಿರುವ ಗೋವಾ ಎಸ್‍ಐಟಿ ಸತೀಶ್ ಸೈಲ್‍ಗೆ ಇಂದು ಕೋರ್ಟ್ ಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ಏಪ್ರಿಲ್ 9 ರಂದೇ ಎಸ್‍ಐಟಿ ನೋಟಿಸ್ ನೀಡಿದ್ರೂ ಸತೀಶ್ ಸೈಲ್ ಹಾಜರಾಗದೆ ತಪ್ಪಿಸಿಕೊಂಡಿದ್ದರು. ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಿದ್ದು, ಹೆಚ್ಚಿನ ವಿಚಾರಣೆಗಾಗಿ ಗೋವಾ ಎಸ್‍ಐಟಿ ಸತೀಶ್‍ರನ್ನ ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಇಂದು ಏನ್ ಮಾಡ್ತಾರೆ ಅನ್ನೋದನ್ನ ಕಾದು ನೋಡಬೇಕು. ಒಂದು ವೇಳೆ, ಬಂಧನಕ್ಕೆ ಒಳಗಾದ್ರೆ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪೋದು ನಿಶ್ಚಿತ. ಹೀಗಾಗಿ ಪರ್ಯಾಯ ಅಭ್ಯರ್ಥಿಯ ಹುಡುಕಾಟದಲ್ಲಿದ್ದು, ಮತ್ತೋರ್ವ ಆಕಾಂಕ್ಷಿ ರಾಜೇಂದ್ರ ನಾಯ್ಕ್ ರನ್ನ ದೆಹಲಿಗೆ ಕರೆಸಿಕೊಂಡಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.