ಚಾಮರಾಜನಗರ: ಕಾಂಗ್ರೆಸ್ (Congress) ಅಭ್ಯರ್ಥಿ ಹಾಗೂ ಸಚಿವ ಡಾ.ಹೆಚ್.ಸಿ.ಮಹದೇವಪ್ಪ (H.C.Mahadevappa) ಅವರ ಪುತ್ರ ಸುನಿಲ್ ಬೋಸ್ ಚಾಮರಾಜನಗರ (Chamarajanagara) ಕ್ಷೇತ್ರದಲ್ಲಿ ಚೊಚ್ಚಲ ಗೆಲುವು ದಾಖಲಿಸಿ ಪಾರ್ಲಿಮೆಂಟ್ ಪ್ರವೇಶಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ವಿರುದ್ಧ 1.19 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸುನಿಲ್ ಬೋಸ್ (Sunil Bose) ಗೆದ್ದಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಇದನ್ನೂ ಓದಿ: ತವರಲ್ಲಿ ಸಿಎಂಗೆ ಮುಖಭಂಗ – ಮೈಸೂರಲ್ಲಿ ಒಡೆಯರ್ ದರ್ಬಾರ್
Advertisement
Advertisement
2019ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಆರ್.ಧ್ರುವನಾರಾಯಣ್ ವಿರುದ್ಧ ಬಿಜೆಪಿಯಿಂದ ವಿ.ಶ್ರೀನಿವಾಸ್ ಸ್ಪರ್ಧಿಸಿ ಬಹಳ ಕಡಿಮೆ ಅಂತರದಿಂದ ಗೆದ್ದಿದ್ದರು. ಅದೇ ನನಗೆ ಕೊನೆ ಚುನಾವಣೆ ಎಂದು ಪ್ರಸಾದ್ ಘೋಷಿಸಿದ್ದರು.
Advertisement
ವಯಸ್ಸಿನ ಕಾರಣಕ್ಕೆ ಶ್ರೀನಿವಾಸ್ ಪ್ರಸಾದ್ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದರು. ಹೀಗಾಗಿ ಬಿಜೆಪಿ ಬಸವರಾಜ್ ಅವರಿಗೆ ಟಿಕೆಟ್ ನೀಡಿತು. ಇತ್ತ ಮಹದೇವಪ್ರಸಾದ್ ಕಸರತ್ತು ನಡೆಸಿ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ಅಂಜಲಿ ನಿಂಬಾಳ್ಕರ್ ವಿರುದ್ಧ ಕಾಗೇರಿಗೆ ಗೆಲುವು- ಉತ್ತರ ಕನ್ನಡದಲ್ಲಿ ಸಂಭ್ರಮಾಚರಣೆ
Advertisement
ಚುನಾವಣೆ ಹೊತ್ತಲ್ಲಿ ವೈಮನಸ್ಸನ್ನು ಮರೆತು ಪ್ರಸಾದ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಅಚ್ಚರಿ ಮೂಡಿಸಿದ್ದರು. ಕಾಂಗ್ರೆಸ್‌ಗೆ ಬೆಂಬಲ ನೀಡುವಂತೆ ಮಾತುಕತೆ ನಡೆಸಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಾಗಿತ್ತು. ಆದರೆ ಚುನಾವಣೆ ನಡೆದ ಕೆಲವೇ ದಿನಗಳಲ್ಲಿ ಪ್ರಸಾದ್ ಇಹಲೋಕ ತ್ಯಜಿಸಿದರು.