ಹುಬ್ಬಳ್ಳಿ: ಇನ್ನೂ ಮೂರ್ನಾಲ್ಕು ದಿನಗಳಲ್ಲಿ ಲೋಕಸಭಾ ಚುನಾವಣೆಯ (Lok Sabha Elections) ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿತ್ತು. 75% ಕ್ಷೇತ್ರಕ್ಕೆ ಹೋಗಿ ಕಾರ್ಯಕರ್ತರನ್ನು ಭೇಟಿ ಆಗಿ ಬಂದಿದ್ದಾರೆ. ಅವರೆಲ್ಲರೂ ಈಗಾಗಲೇ ಅಭ್ಯರ್ಥಿಗಳ ವರದಿ ತಯಾರಿ ಮಾಡಿಕೊಂಡಿದ್ದಾರೆ. ವೀಕ್ಷಕರು ಇನ್ನೂ ಅಭ್ಯರ್ಥಿಗಳ ವರದಿ ಕೊಟ್ಟಿಲ್ಲ, ಈ ಬಗ್ಗೆ ನಮ್ಮ ವರಿಷ್ಠರು ಸಹ ಕೆಲವು ಸಲಹೆ ನೀಡಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಹಾಸನಾಂಬೆ ಸಾರ್ವಜನಿಕ ದರ್ಶನೋತ್ಸವ ಇಂದಿನಿಂದ ಆರಂಭ
ಕರ್ನಾಟಕಕ್ಕೆ 50ನೇ ವರ್ಷ, ಇಡೀ ವರ್ಷ ಹಬ್ಬದ ಆಚರಣೆ ಮಾಡಲು ತೀರ್ಮಾನ ಮಾಡಿದ್ದೇವೆ. ವಿಜಯನಗರ ನಾಡು ಹಂಪಿಯಿಂದ ಜ್ಯೋತಿ ಶುರುವಾಗಿದೆ. ಇದಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ. ಮುಂದಿನ ಭಾಗವಾಗಿ ಇಂದು ಗದಗದಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ಇಂದು 10 ಜನ ಮಂತ್ರಿಗಳು ಗದಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ಈಗಾಗಲೇ ಮುಖ್ಯಮಂತ್ರಿಗಳು ಭುವನೇಶ್ವರಿ ಭವನವನ್ನು ಕಟ್ಟಿಸಲು ತೀರ್ಮಾನ ಮಾಡಿದ್ದಾರೆ ಎಂದಿದ್ದಾರೆ.
ಬಿಜೆಪಿಯವರು ಬರ ಸಮೀಕ್ಷೆ ಮಾಡಲಿ, ಅವರು ದೆಹಲಿಗೆ ಹೋಗಿ ವರದಿ ಕೊಡಲಿ. ಕಾಂಗ್ರೆಸ್‍ನ ಚಲುವರಾಯ ಸ್ವಾಮಿ, ಕೃಷ್ಣ ಭೈರೆಗೌಡರ ತಂಡ ಬರ ಅಧ್ಯಯನ ಮಾಡಿದೆ. ಎಲ್ಲಾ ಜಿಲ್ಲೆಗಳಿಗೆ ಹೋಗಿ ಅಧ್ಯಯನ ಮಾಡಿ 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಒಂದು ಸಾವಿರ ಕೋಟಿ ರೂ.ಗೂ ಹೆಚ್ಚು ಹಣ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.
ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನಗಳಿಲ್ಲ, ನಮ್ಮಲ್ಲಿ ಎಲ್ಲಿ ಅಸಮಾಧಾನ ಇದೆ? ಕಾಂಗ್ರೆಸ್‍ನಲ್ಲಿ (Congress) ಯಾವುದೇ ರೀತಿಯ ಅಸಮಾಧಾನ ಇಲ್ಲ ಎಂದಿದ್ದಾರೆ. ರಾಜ್ಯ ಸರ್ಕಾರ ರಚನೆಯಾಗಿ ಐದು ತಿಂಗಳು ಕಳೆದರೂ ಇನ್ನೂ ಬಿಜೆಪಿ (BJP) ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಬಿಜೆಪಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಮರ್ಥ್ಯ ಇಲ್ಲ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಮೂರು ಗುಡಿಸಲುಗಳಿಗೆ ಬೆಂಕಿ- ಪ್ರಾಣವನ್ನೂ ಲೆಕ್ಕಿಸದೇ ಇಬ್ಬರ ಜೀವ ಉಳಿಸಿದ ಮಹಿಳೆಯರು
Web Stories