ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಚುರುಕುಗೊಳಿಸಿದೆ. ಇಂದು ಬೆಳಗ್ಗೆ 11 ಗಂಟೆಯಿಂದ ಕೆಪಿಸಿಸಿ ಚುನಾವಣಾ ಸಮಿತಿ ಸಭೆ ನಗರದ ಹೊರ ವಲಯದ ರೆಸಾರ್ಟ್ ನಲ್ಲಿ ನಡೆಯಲಿದೆ.
ಅಭ್ಯರ್ಥಿಗಳ ಹಾಗೂ ಗೆಲ್ಲುವ ಆಕಾಂಕ್ಷಿಗಳ ಬಗ್ಗೆ ಚರ್ಚಿಸಿ ಸ್ಕ್ರೀನಿಂಗ್ ಕಮಿಟಿಗೆ ಸಮಿತಿ ಪಟ್ಟಿಯನ್ನ ರವಾನಿಸಲಿದೆ. ಎರಡಕ್ಕಿಂತ ಹೆಚ್ಚು ಬಾರಿ ಜಯಗಳಿಸಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿ ಅನ್ನೋ ಮನವಿಯನ್ನು ಹೈಕಮಾಂಡ್‍ಗೆ ಸಮಿತಿ ಮಾಡುವ ಸಾಧ್ಯತೆ ಇದೆ.
Advertisement
ರಾಜ್ಯ ಕಾಂಗ್ರೆಸ್ ಚುನಾವಣಾ ಸಮಿತಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್ ಹಾಗೂ ಸಂಸದರು, ಸಚಿವರು ಸೇರಿದಂತೆ 45 ಮಂದಿ ಸದಸ್ಯರಿದ್ದಾರೆ. ಇದೂವರೆಗೆ ಕೆಪಿಸಿಸಿಯಿಂದ 2,650 ಅರ್ಜಿ ಸ್ವೀಕರಿಸಲಾಗಿದೆ. ಇದರಲ್ಲಿ 1,570 ಅರ್ಜಿ ಸಲ್ಲಿಕೆಯಾಗಿದ್ದು, ಎಷ್ಟು ಜನರಿಗೆ ಅಭ್ಯರ್ಥಿಯಾಗುವ ಭಾಗ್ಯ ಒಲಿಯಲಿದೆ ಎಂಬುದು ಇಂದು ತೀರ್ಮಾನವಾಗಲಿದೆ.