ನವದೆಹಲಿ/ತಿರುವನಂತಪುರಂ: ಗಾಂಧಿ ಕುಟುಂಬದ (Gandhi Family) ಯಾರೊಬ್ಬರೋ ಕಾಂಗ್ರೆಸ್ (Congress) ಮುಖ್ಯಸ್ಥರಾಗಬಾರದೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸ್ಪಷ್ಟಪಡಿರುವುದಾಗಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ತಿಳಿಸಿದ್ದಾರೆ.
Advertisement
ಭಾರತ್ ಜೋಡೋ ಯಾತ್ರೆ (Bharat Jodo Yatra) ಯಲ್ಲಿ ಪಾಲ್ಗೊಂಡಿರುವ ಸಿಎಂ (Rajasthan Chief Minister), ಕೇರಳದಲ್ಲಿ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಎಲ್ಲರ ಆಶಯದಂತೆ ಕಾಂಗ್ರೆಸ್ (Congress) ಅಧ್ಯಕ್ಷರಾಗಿ ಮರಳಲು ಸಾಕಷ್ಟು ಬಾರಿ ಅವರಲ್ಲಿ ವಿನಂತಿಸಿದೆ. ಆದರೆ ರಾಹುಲ್ ಜೀ ಅವರು, ನಾನು ಎಲ್ಲರ ಆಶಯವನ್ನು ಗೌರವಿಸುತ್ತೇನೆ. ಆದರೆ ಒಂದೇ ಒಂದು ಕಾರಣಕ್ಕಾಗಿ ಗಾಂಧಿ ಕುಟುಂಬೇತರರು ಕಾಂಗ್ರೆಸ್ ಅಧ್ಯಕ್ಷರಾಗಬೇಕೆಂದು ನಿರ್ಧರಿಸಿದ್ದೇನೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
Advertisement
Advertisement
ಬಿಜೆಪಿಯ (BJP) ಸ್ವಜನ ಪಕ್ಷಪಾತದ ಆರೋಪವೇ ರಾಹುಲ್ ಗಾಂಧಿ ಈ ನಿರ್ಧಾರಕ್ಕೆ ಕಾರಣ ಎಂದು ಪ್ರಶ್ನಿಸಿದ ಮಾಧ್ಯಮಗಳಿಗೆ ಉತ್ತರಿಸಿದ ಅವರು, 2019 ರಲ್ಲಿ ಯಾವುದೇ ಹುದ್ದೆಗಳಿಲ್ಲದೇ ಕೆಲಸ ಮಾಡುವುದಾಗಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ತಿಳಿಸಿದ್ದರು. ಅದರಂತೆ ಅವರು ನಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪತ್ರಕರ್ತೆ ಹಿಜಬ್ ಧರಿಸದ್ದಕ್ಕೆ ಸಂದರ್ಶನವನ್ನೇ ರದ್ದುಗೊಳಿಸಿದ ಇರಾನ್ ಅಧ್ಯಕ್ಷ
Advertisement
ಈ ಹಿಂದೆ ಉದಯಪುರದಲ್ಲಿ ನಡೆದಿದ್ದ ಕಾಂಗ್ರೆಸ್‌ನ ಚಿಂತನಾ ಶಿಬಿರದಲ್ಲಿ `ಒಬ್ಬ ವ್ಯಕ್ತಿ – ಒಂದು ಹುದ್ದೆ’ ನಿಯಮವನ್ನೂ ಅಳವಡಿಸಿಕೊಂಡಿದೆ. ಇದನ್ನೂ ಓದಿ: ಬೆಂಗಳೂರು ಬಳಿಕ ಈಗ ಜಿಲ್ಲೆಗಳಿಗೂ ನುಗ್ಗಿದ ಬುಲ್ಡೋಜರ್ – ವಿಜಯನಗರದಲ್ಲಿ 40ಕ್ಕೂ ಹೆಚ್ಚು ಮನೆಗಳಿಗೆ ನೋಟಿಸ್
ಅಶೋಕ್ ಗೆಹ್ಲೋಟ್ ಸಹ ನಿನ್ನೆಯಷ್ಟೇ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಸೋಮವಾರ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ.
ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ (Congress Presidential Election) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಸೆಪ್ಟೆಂಬರ್ 24 ರಿಂದ 30 ರವರೆಗೆ ನಡೆಯಲಿದೆ. ಅಕ್ಟೋಬರ್ 1 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನಾಂಕವಾಗಿದೆ. ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಲ್ಲಿ, ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್ 19 ರಂದು ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆಯಾಗಲಿದೆ.