– 2 ಪುಟಗಳ ಪತ್ರದಲ್ಲಿ ಏನಿದೆ?
ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ಭೇಟಿ ಮಾಡಲು ಸಮಯ ಕೇಳಿದ್ದಾರೆ.
ಸುಮಾರು 2 ಪುಟಗಳ ಪತ್ರ ಬರೆದಿರುವ ಖರ್ಗೆ (Mallikarjun Kharge), ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಮೋದಿ ನಿರಂತರ ವಾಗ್ದಾಳಿ ನಡೆಸುತ್ತಿದ್ದು, ಕಾಂಗ್ರೆಸ್ ಗ್ಯಾರಂಟಿಗಳನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಅವರಿಗೆ ತಪ್ಪು ಮಾಹಿತಿಯನ್ನ ನೀಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸುವುದಾಗಿದೆ. ಹೀಗಾಗಿ ನಿಮ್ಮ ಭೇಟಿಗೆ ಅವಕಾಶ ಸಿಕ್ಕರೆ, ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ತಿಳಿಸಿ ಹೇಳುತ್ತೇನೆ ಎಂದಿದ್ದಾರೆ.
ಪ್ರಧಾನಿ ಮೋದಿ ನಮ್ಮ ಪ್ರಣಾಳಿಕೆ (Congress Manifesto) ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡುವುದು ಬೇಡ. ಕಾಂಗ್ರೆಸ್‌ನ ‘ನ್ಯಾಯ ಪತ್ರ’ ಯುವಕರು, ಮಹಿಳೆಯರು, ರೈತರು, ಕಾರ್ಮಿಕರು ಮತ್ತು ಎಲ್ಲಾ ಜಾತಿಗಳು ಮತ್ತು ಸಮುದಾಯಗಳ ಅಂಚಿನಲ್ಲಿರುವ ಜನರಿಗೆ ನ್ಯಾಯ ಒದಗಿಸುವ ಗುರಿಯನ್ನು ಹೊಂದಿದೆ. ಕೋಮು ವಿಭಜನೆಯನ್ನು ಸೃಷ್ಟಿಸುವುದು ನಿಮಗೆ ಅಭ್ಯಾಸವಾಗಿದೆ. ನೀವು ಈ ರೀತಿ ಮಾತನಾಡುವ ಮೂಲಕ ಕುರ್ಚಿಯ ಘನತೆಯನ್ನು ಕಡಿಮೆ ಮಾಡುತ್ತಿದ್ದೀರಿ ಎಂದು ಅವರು ಹೇಳಿದರು. ಇದನ್ನೂ ಓದಿ: ಮುಸ್ಲಿಮರ 4% ಮೀಸಲಾತಿ ಮುಂದುವರಿಸೋದಾಗಿ ಬಿಜೆಪಿ ಸುಪ್ರೀಂಗೆ ಹೇಳಿತ್ತು: ಸಿದ್ದರಾಮಯ್ಯ ತಿರುಗೇಟು
ಪ್ರಧಾನಿಯವರು ತಮ್ಮ ಇತ್ತೀಚಿನ ಭಾಷಣಗಳಲ್ಲಿ ಬಳಸಿದ ಭಾಷೆಯಿಂದ ನನಗೆ ಆಘಾತವಾಗಲೀ ಅಥವಾ ಆಶ್ಚರ್ಯವಾಗಲೀ ಆಗಿಲ್ಲ. ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಪ್ರದರ್ಶನವನ್ನು ನೋಡಿದ ನಂತರ ನೀವು ಮತ್ತು ನಿಮ್ಮ ಪಕ್ಷದ ಇತರ ನಾಯಕರು ಈ ರೀತಿ ಮಾತನಾಡಲು ಪ್ರಾರಂಭಿಸುತ್ತೀರಿ ಎಂದು ನಿರೀಕ್ಷಿಸಲಾಗಿತ್ತು ಎಂದು ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.