Connect with us

Latest

ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್

Published

on

ನವದೆಹಲಿ: ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧಿನಾಯಕಿ ಇಂದು ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹಿರಿಯ ವೈದ್ಯರು ಮಾಹಿತಿ ನೀಡಿದ್ದಾರೆ. 73 ವರ್ಷದ ಸೋನಿಯಾ ಗಾಂಧಿ ಗುರುವಾರ ಸಂಜೆ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದರು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜುಲೈ 30, 2020ರಂದು ಸಂಜೆ 7 ಗಂಟೆಗೆ ದಾಖಲಾಗಿದ್ದರು. ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದ್ದು, ಇಂದು ಮಧ್ಯಾಹ್ನ 1 ಗಂಟೆಗೆ ಡಿಸ್ಚಾರ್ಜ್ ಆಗಿದ್ದಾರೆ ಎಂದು ಡಾ.ಡಿ.ಎಸ್.ರಾಣಾ ಹೇಳಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸೋನಿಯಾ ಗಾಂಧಿ ಪಕ್ಷದ ರಾಜ್ಯ ಸಭಾ ಸಂಸದರೊಂದಿಗೆ ನಡೆಯಲಿರುವ ವರ್ಚೂವಲ್ ಮೀಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಹಲವು ಹಿರಿಯ ಕೈ ನಾಯಕರು ಹಾಜರಾಗಲಿದ್ದಾರೆ.

Click to comment

Leave a Reply

Your email address will not be published. Required fields are marked *