ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಮುಖ್ಯಮಂತ್ರಿಯಾಗಿ (CM) ಸುಖ್ವಿಂದರ್ ಸಿಂಗ್ ಸುಖು (Sukhvinder Singh Sukhu) ಅವರ ಹೆಸರನ್ನು ಕಾಂಗ್ರೆಸ್ (Congress) ಹೈಕಮಾಂಡ್ ಅನುಮೋದಿಸಿದೆ. ಕಾಂಗ್ರೆಸ್‌ನ ನಾಯಕರೊಂದಿಗೆ ಚರ್ಚಿಸಿದ ಬಳಿಕ ಶನಿವಾರ ಸುಖ್ವಿಂದರ್ ಸಿಂಗ್ ಅವರ ಹೆಸರನ್ನು ಕಾಂಗ್ರೆಸ್ ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ.
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಜಯಭೇರಿ ಸಾಧಿಸಿದೆ. ಚುನಾವಣೆಯಲ್ಲಿ ಕಾಂಗ್ರೆಸ್ 40, ಬಿಜೆಪಿ 25 ಹಾಗೂ ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ಪಾಲಿಕೆಗೆ ಆಯ್ಕೆಯಾದ ಆಪ್ ಕೌನ್ಸಿಲರ್‌ಗಳನ್ನು ಖರೀದಿಸಲು BJP ಯತ್ನ – ಆಪ್ ಆರೋಪ
Advertisement
Advertisement
ಹಿಮಾಚಲದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ಸಿಂಗ್ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಾರೆ ಎಂಬ ನಿರೀಕ್ಷೆ ಹುಟ್ಟಿಕೊಂಡಿತ್ತು. ಆದರೆ ಸಿಂಗ್ ಮುಖ್ಯಮಂತ್ರಿ ರೇಸ್‌ನಿಂದ ಹೊರಗುಳಿದಿದ್ದಾರೆ ಎನ್ನಲಾಗಿದ್ದು, ಸುಖ್ವಿಂದರ್ ಸಿಂಗ್ ಸುಖು ಅವರನ್ನೇ ಸಿಎಂ ಸ್ಥಾನಕ್ಕೆ ಕಾಂಗ್ರೆಸ್ ಆಯ್ಕೆ ಮಾಡಲಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಜನವರಿಯಲ್ಲಿ ರಾಜ್ಯಕ್ಕೆ ಪ್ರಧಾನಿ ಮೋದಿ 4 ಬಾರಿ ಬರಲಿದ್ದಾರೆ: ಪ್ರಹ್ಲಾದ್ ಜೋಶಿ