ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಹಮ್ಮದ್ ಬಿನ್ ತುಘಲಕ್ ಗುಣಲಕ್ಷಣಗಳನ್ನು ಹೊಂದಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ವ್ಯಂಗ್ಯವಾಡಿದೆ.
ಆಪರೇಷನ್ ಕಮಲವನ್ನು ಖಂಡಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಮಹಮ್ಮದ್ ಬಿನ್ ತುಘಲಕ್ ನಂತರ ಭಾರತವನ್ನು ಆಳುತ್ತಿರುವ ಅದೇ ಗುಣಗಳುಳ್ಳ ವ್ಯಕ್ತಿ, ನರೇಂದ್ರ ಮೋದಿ. ನೈತಿಕತೆ ಮತ್ತು ಮೌಲ್ಯ ಹೀನ ರಾಜಕಾರಣಿ. ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ತಿಲಾಂಜಲಿ ಇಟ್ಟು 10 ರಾಜ್ಯಗಳಲ್ಲಿ ಆಪರೇಷನ್ ಕಮಲ ಮಾಡಿದ್ದಾರೆ. ಕರ್ನಾಟಕವು ಮೋದಿಯ ಸಂಚಿಗೆ ಬಲಿಯಾಗಬಾರದು ಎಂದು ಕಿಡಿಕಾರಿದೆ.
ಮೊಹಮ್ಮದ್ ಬಿನ್ ತೊಘಲಕ್ ನಂತರ…
ಈ ಭಾರತವನ್ನು ಆಳುತ್ತಿರುವ…
ಅದೇ ಗುಣಗಳುಳ್ಳ ವ್ಯಕ್ತಿ, ನರೇಂದ್ರ ಮೋದಿ!
ನೈತಿಕತೆ ಮತ್ತು ಮೌಲ್ಯ ಹೀನ ರಾಜಕಾರಣಿ.
ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ತಿಲಾಂಜಲಿ ಇಟ್ಟು 10 ರಾಜ್ಯಗಳಲ್ಲಿ ಆಪರೇಷನ್ ಕಮಲ ಮಾಡಿದ್ದಾರೆ. ಕರ್ನಾಟಕವು ಮೋದಿಯ ಸಂಚಿಗೆ ಬಲಿಯಾಗಬಾರದು.
— Karnataka Congress (@INCKarnataka) July 7, 2019
ಕಾಂಗ್ರೆಸ್-ಜೆಡಿಎಸ್‍ನ ಅತೃಪ್ತ 12 ಶಾಸಕ ಶನಿವಾರ ರಾಜೀನಾಮೆ ನೀಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದರು. ಆನಂದ್ ಸಿಂಗ್ ಅವರನ್ನು ಸೇರಿದಂತೆ ಒಟ್ಟು 13 ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆ ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ಶಾಕ್ ನೀಡಿದ್ದು, ಮನವೊಲಿಕೆಗೆ ತಂತ್ರ ರೂಪಿಸುತ್ತಿದ್ದಾರೆ.
ರಾಜೀನಾಮೆ ಕೊಟ್ಟ ಅತೃಪ್ತರು:
ಗೋಕಾಕ್‍ನ ರಮೇಶ್ ಜಾರಕಿಹೊಳಿ, ಹಿರೇಕೆರೂರುನ ಬಿ.ಸಿ. ಪಾಟೀಲ್, ಮಸ್ಕಿಯ ಪ್ರತಾಪ್‍ಗೌಡ ಪಾಟೀಲ್, ಯಲ್ಲಾಪುರದ ಶಿವರಾಮ್ ಹೆಬ್ಬಾರ್, ಅಥಣಿಯ ಮಹೇಶ್ ಕುಮಟಳ್ಳಿ, ಹುಣಸೂರಿನ ಎಚ್. ವಿಶ್ವನಾಥ್, ಕೆ.ಆರ್.ಪೇಟೆಯ ನಾರಾಯಣಗೌಡ, ಮಹಾಲಕ್ಷ್ಮಿ ಲೇಔಟ್‍ನ ಗೋಪಾಲಯ್ಯ, ಬಿಟಿಎಂ ಲೇಔಟ್‍ನ ರಾಮಲಿಂಗಾರೆಡ್ಡಿ, ಯಶವಂತಪುರದ ಎಸ್.ಟಿ ಸೋಮಶೇಖರ್, ಕೆ.ಆರ್.ಪುರಂನ ಭೈರತಿ ಬಸವರಾಜ್ ರಾಜೀನಾಮೆ ನೀಡಿದ್ದು ಮುಂಬೈಗೆ ಹೋಗಿದ್ದಾರೆ. ಆದರೆ ಆರ್‍ಆರ್ ನಗರದ ಮುನಿರತ್ನ, ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ ಹಾಗೂ ವಿಜಯನಗರದ ಆನಂದ ಸಿಂಗ್ ಅವರು ರಾಜೀನಾಮೆ ನೀಡಿದ್ದರೂ ಮುಂಬೈಗೆ ಹೋಗಿಲ್ಲ.